ನವದೆಹಲಿ: ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಘರ್ಷವನ್ನು ಹತೋಟಿಗೆ ತರುವ ಮೂಲಕ ರಾಜ್ಯ ಸಹಜ ಸ್ಥಿತಿಗೆ ಮರಳುವಂತೆ ಮಾಡಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಹಾಗೂ ಪ್ರಸ್ತುತ ಮಣಿಪುರ ರಾಜಕೀಯದಲ್ಲಾಗುತ್ತಿರುವ ಬದಲಾವಣೆ ಕುರಿತೂ ತಿಳಿಸಿದ್ದಾರೆ.

ಆಗಸ್ಟ್ 29 ರಂದು ಮಣಿಪುರ ವಿಧಾನಸಭೆಯ ಒಂದು ದಿನದ ಮಾನ್ಸೂನ್ ಅಧಿವೇಶನ ನಡೆಯಲಿದ್ದು, ಅದಕ್ಕೂ ಮುಂಚಿತವಾಗಿ ಸಿಂಗ್ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.

‘ಕಣಿವೆ, ಗುಡ್ಡಗಾಡು ಪ್ರದೇಶಗಳಲ್ಲಿನ ಸಂತ್ರಸ್ತ ಜನರಿಗೆ ಪುನರ್ವಸತಿ ಕಲ್ಪಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಈಗಾಗಲೇ 8 ಸೈಟ್ಗಳಲ್ಲಿ ಪ್ರೀ ಫ್ಯಾಬ್ರಿಕೇಟೆಡ್ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ’ ಎಂದು ಬಿರೇನ್ ಸಿಂಗ್ ಮಾಹಿತಿ ನೀಡಿದ್ದಾರೆ.

ಮಣಿಪುರದಲ್ಲಿ ಮೇ 3 ರಂದು ಆರಂಭವಾದ ಜನಾಂಗೀಯ ಸಂಘರ್ಷದಲ್ಲಿ ಹಲವು ವಿದ್ವಂಸಕ ಕೃತ್ಯಗಳಿಗೆ ಕಾರಣವಾಗಿತ್ತು. ಸಂಘರ್ಷದಲ್ಲಿ 160ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.