ದೆಹಲಿಯ ಜಂತರ್ ಮಂತರ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಮಣಿಪುರದ ಬುಡಕಟ್ಟು ಜನ –ಪಿಟಿಐ ಚಿತ್ರ
ರಾಷ್ಟ್ರಪತಿ ಆಡಳಿತ ಜಾರಿಗೆ ಆಗ್ರಹ
ಮಣಿಪುರದ ಬುಡಕಟ್ಟು ಸಂಘಟನೆಗಳ ಮುಖಂಡರು ಬುಧವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಒಗ್ಗಟ್ಟಿನ ಯಾತ್ರೆ ನಡೆಸಿದರು. ಜನಾಂಗೀಯ ಘರ್ಷಣೆಯನ್ನು ಶಮನಗೊಳಿಸುವ ಕಾರ್ಯ ನಡೆಯುತ್ತಿದೆ. ಕೂಡಲೇ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು. ಈ ಹಿಂಸಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
5ರವರೆಗೆ ಇಂಟರ್‌ನೆಟ್ ಸಂಪರ್ಕ ಕಡಿತ
ಹಿಂಸಾಚಾರ ಮತ್ತೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಮೊಬೈಲ್ ಮತ್ತು ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್ ಸೇವೆಯ ಬಳಕೆ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಜೂನ್ 5ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಲವೆಡೆ ರಸ್ತೆ ಸಂಚಾರ ಬಂದ್ ಮಾಡಿರುವುದರಿಂದ ಭದ್ರತಾ ಪಡೆಯ ಯೋಧರು ಮತ್ತು ಅಗತ್ಯ ವಸ್ತುಗಳ ಸಾಗಣೆ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಹಾಗಾಗಿ ನಾಗರಿಕರು ರಸ್ತೆ ಬಂದ್ ಮಾಡದಂತೆ ಮುಖ್ಯಮಂತ್ರಿ ಬಿರೆನ್ ಸಿಂಗ್ ಮನವಿ ಮಾಡಿದ್ದಾರೆ.