ಇಂಫಾಲ್: ಮಣಿಪುರದ ಇಂಫಾಲ್ ಕಣಿವೆ ಮತ್ತು ಜಿರೀಬಾಮ್ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮುಚ್ಚಲ್ಪಟ್ಟಿದ್ದ ಶಾಲಾ– ಕಾಲೇಜುಗಳು ಸೋಮವಾರ (ನ.25) ಪುನರಾರಂಭಗೊಳ್ಳಲಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ.16ರಂದು ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳ ಮೃತದೇಹ ಪತ್ತೆಯಾದ ಬಳಿಕ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಾಲ್, ವಿಷ್ಣುಪುರ ಮತ್ತು ಜಿರೀಬಾಮ್ನಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು.
.ಜಿರೀಬಾಮ್ ಪ್ರಕರಣ: ನೆಕ್ಟರ್ ಸಂಜೆನ್ಬಮ್ ಕರ್ತವ್ಯದಿಂದ ಬಿಡುಗಡೆ.
ನವೆಂಬರ್ 25 ರಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲೆಗಳು ಪುನರಾರಂಭಗೊಳ್ಳಲಿವೆ ಎಂದು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ವಿಶ್ವವಿದ್ಯಾಲಯಗಳು ಸೇರಿದಂತೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ ನವೆಂಬರ್ 25ರಿಂದ ತರಗತಿಗಳನ್ನು ಪುನರಾರಂಭಿಸುವಂತೆ ಸೂಚಿಸಲಾಗಿದೆ.
.ಮಣಿಪುರ: ಮೊಬೈಲ್ ಇಂಟರ್ನೆಟ್ ಮೇಲಿನ ನಿರ್ಬಂಧ 2 ದಿನ ಮುಂದುವರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.