ಚುರಾಚಂದಪುರ: ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆಯಾದ ಕಾಂಗ್ಲೇಪಕ್ ಕಮ್ಯುನಿಸ್ಟ್ ಪಾರ್ಟಿಯ (ಪೀಪಲ್ಸ್ ವಾರ್ ಗ್ರೂಪ್) ಆರು ಉಗ್ರರನ್ನು ಬಂಧಿಸಲಾಗಿದ್ದು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಅಕ್ರಮ ಶಸ್ತ್ರಾಸ್ತ್ರ ವಹಿವಾಟು ಮತ್ತು ಸಾರ್ವಜನಿಕರು ಹಾಗೂ ಸರ್ಕಾರಿ ಕಚೇರಿಗಳಿಂದಲೂ ಬಂಧಿತರು ಸುಲಿಗೆ ಮಾಡುತ್ತಿದ್ದರು. ಬಂಧಿತರಿಂದ 4 ಕಾರು, 2 ಬೈಕ್ ಮತ್ತು ಅನೇಕ ಮೊಬೈಲ್ ಫೋನ್ ಸೇರಿದಂತೆ ಸುಮಾರು ₹4ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
.ಸಿಎಂ ಭೇಟಿಯಾದ ಯೋಗೇಶ್ವರ್: ಇಂದೇ ಕಾಂಗ್ರೆಸ್ ಸೇರ್ಪಡೆ.ಬೆಂಗಳೂರು| ಕಟ್ಟಡ ಕುಸಿತ ಪ್ರಕರಣ: ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿ ವಿರುದ್ಧ FIR.
ಚುರಾಚಂದಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬಂದೂಕುಗಳು, ಎರಡು ಎಲೆಕ್ಟ್ರಿಕ್ ಡಿಟೋನೇಟರ್ಗಳು, ಮ್ಯಾಗಜೀನ್ ಜತೆಗೆ 9 ಎಂಎಂ ಪಿಸ್ತೂಲ್ ಹಾಗೂ ಮೂರು ಹ್ಯಾಂಡ್ ಗ್ರೆನೇಡ್ಗಳನ್ನೂ ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಲಾಮ್ಜಾಂಗ್ ಅರಣ್ಯ ಪ್ರದೇಶದಲ್ಲಿ ಮತ್ತೊಂದು ಶೋಧ ಕಾರ್ಯಾಚರಣೆ ವೇಳೆ 303 ರೈಫಲ್ , ಸಿಂಗಲ್ ಬ್ಯಾರೆಲ್ ಬಂದೂಕು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.Jharkhand Polls | 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಎಂಎಂ.Maharashtra: 45 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಶಿವಸೇನಾ ಶಿಂದೆ ಬಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.