ಇಂಫಾಲ್: ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಅಪಹರಣಕ್ಕೆ ಒಳಗಾಗಿದ್ದ ಇಬ್ಬರು ಯುವಕರನ್ನು ಬಿಡುಗಡೆಗೊಳಿಸಲಾಗಿದೆ. ಏಳು ದಿನಗಳ ಬಳಿಕ ಇಂದು (ಗುರುವಾರ) ಮುಂಜಾನೆ ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ರಾಜ್ಯ ಪೊಲೀಸರು ಮತ್ತು ಅಸ್ಸಾಂ ಪಡೆಗಳ ಬೆಂಗಾವಲಿನಲ್ಲಿ ಇಬ್ಬರು ಯುವಕರು ಸುರಕ್ಷಿತವಾಗಿ ಇಂಫಾಲ್ ತಲುಪಿದ್ದಾರೆ. ಯುವಕರು ಈಗ ಇಂಫಾಲ್ ಪೊಲೀಸ್ ಠಾಣೆಯಲ್ಲಿದ್ದು, ಕೆಲವು ಔಪಚಾರಿಕ ಕಾರ್ಯಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಅವರ ಕುಟುಂಬ ಸದಸ್ಯರು ಕೂಡ ಠಾಣೆಯಲ್ಲಿದ್ದು, ಅವರನ್ನು ಶೀಘ್ರವೇ ಅವರ ಕುಟುಂಬದವರಿಗೆ ಒಪ್ಪಿಸಲಾಗುವುದು’ ಎಂದು ಪೊಲೀಸರು ಹೇಳಿದ್ದಾರೆ.

ಸೆಪ್ಟೆಂಬರ್ 27ರಂದು ಥೌಬಲ್ ಜಿಲ್ಲೆಯ ಮೂವರು ಯುವಕರನ್ನು ಕಾಂಗ್‌ಪೊಕ್ಪಿಯಲ್ಲಿ ಅಪಹರಿಸಲಾಗಿತ್ತು. ಈ ಪೈಕಿ ಒಬ್ಬನನ್ನು ಬಿಡುಗಡೆ ಮಾಡಿದ್ದು, ಇನ್ನಿಬ್ಬರನ್ನು ಸೆರೆಯಲ್ಲಿ ಇಡಲಾಗಿತ್ತು.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್‌ಸಿಂಗ್ ‘ಸೆಪ್ಟೆಂಬರ್ 27ರಂದು ಕಾಂಗ್‌ಪೊಕ್ಪಿಯಲ್ಲಿ ಅಪಹರಣಗೊಂಡಿದ್ದ ಇಬ್ಬರು ಯುವಕರು ಸುರಕ್ಷಿತವಾಗಿ ಬಿಡುಗಡೆಗೊಂಡಿದ್ದಾರೆ. ಅವರ ಸುರಕ್ಷಿತ ಬಿಡುಗಡೆಗಾಗಿ ಅವಿರತವಾಗಿ ಶ್ರಮ ವಹಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ನಾನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.