ನವದೆಹಲಿ: ಪಕ್ಷದ ದೆಹಲಿ ಘಟಕದ ಅಧ್ಯಕ್ಷ ಸ್ಥಾನದಿಂದ ಮನೋಜ್ ತಿವಾರಿ ಅವರನ್ನು ತೆರವುಗೊಳಿಸಲಾಗಿದೆ. ನೂತನ ಅಧ್ಯಕ್ಷರಾಗಿ ಅದೇಶ್ ಕುಮಾರ್ ಗುಪ್ತಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಬಿಜೆಪಿ ಮಂಗಳವಾರ ತಿಳಿಸಿದೆ. ಅದೇಶ್ ಅವರು ಉತ್ತರ ದೆಹಲಿ ಪುರಸಭೆಯ ಮಾಜಿ ಮೇಯರ್ ಆಗಿದ್ದಾರೆ.

ಮನೋಜ್ ತಿವಾರಿ ಅವರು 2016ರಲ್ಲಿ ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲದ ಬಳಿಕ ತಿವಾರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸಲು ಸೂಕ್ತ ಸಮಯ ಎಂದು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಯಾಗಿತ್ತು. ಕೆಲವು ಮೂಲಗಳ ಪ್ರಕಾರ, ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ತಿವಾರಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಪಕ್ಷದ ಮುಂದೆ ಬೇರೆ ಆಯ್ಕೆಗಳಿಲ್ಲದಿರುವುದರಿಂದ ಅವರನ್ನು ಸ್ಥಾನದಲ್ಲಿ ಮುಂದುವರಿಸಲಾಗಿತ್ತು ಎನ್ನಲಾಗಿದೆ.

ಮನೋಜ್ ತಿವಾರಿ ಅವರು ಇತ್ತೀಚೆಗೆ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಹರಿಯಾಣದ ಕ್ರಿಕೆಟ್ ಅಕಾಡೆಮಿಯಲ್ಲಿ ಆಟವಾಡಿದ್ದು ವಿವಾದಕ್ಕೆ ಗ್ರಾಸವಾಗಿತ್ತು.

ದೆಹಲಿ ಚುನಾವಣೆ: ಸೋಲು ಒಪ್ಪಿಕೊಂಡಿದ್ದೇವೆ– ಬಿಜೆಪಿ ನಾಯಕರ ಪ್ರತಿಕ್ರಿಯೆಗಳು

ದೆಹಲಿನಮ್ಮನ್ನು ತಿರಸ್ಕರಿಸಿಲ್ಲ, ಬಿಜೆಪಿ ಮತಗಳು ಏರಿಕೆ ಕಂಡಿವೆ: ಮನೋಜ್ ತಿವಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.