ಮುಂಬೈ: ಆಗಸ್ಟ್ 20ರಂದು ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಮುಂಬೈನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು ಭಾನುವಾರ ತಿಳಿಸಿದರು.

ರಾಜೀವ್ ಅವರು 1944ರ ಆ.20ರಂದು ಮುಂಬೈನಲ್ಲಿ ಜನಿಸಿದ್ದರು. ಅವರ ಸ್ಮರಣಾರ್ಥ ನಡೆಸಲಾಗುತ್ತಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕ ರಾಹುಲ್ ಗಾಂಧಿ ಅವರು ಭಾಗಿಯಾಗಲಿದ್ದಾರೆ. ಮಹಾ ವಿಕಾಸ ಅಘಾಡಿ (ಎಮ್‌ವಿಎ) ಮೈತ್ರಿಯ ಪಕ್ಷಗಳ ನಾಯಕರಾದ ಶರದ್ ಪವಾರ್ ಹಾಗೂ ಉದ್ಧವ್ ಠಾಕ್ರೆ ಅವರನ್ನೂ ಆಹ್ವಾನಿಸಲಾಗಿದೆ ಎಂದು ಹೇಳಿದರು.

ಭಾನುವಾರ ರಾಜ್ಯದ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದ ಚೆನ್ನಿತ್ತಲ ಬಳಿಕ ಮಾತನಾಡಿ, ‘ಮಹಾರಾಷ್ಟ್ರದ ಜನರು ಬದಲಾವಣೆ ಬಯಸಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಅದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಎಮ್‌ವಿಎಗೆ ಜನರ ಬೆಂಬಲವಿದೆ. ರಾಜ್ಯದಲ್ಲಿ ಬದಲಾವಣೆ ತರಲು ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ. ಇಂದಿನ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ. ಎಂವಿಎ ಮೈತ್ರಿಕೂಟವಾಗಿ ಸ್ಪರ್ಧಿಸುತ್ತೇವೆ’ ಎಂದರು.

ಎಮ್‌ವಿಎಯು ಎನ್‌ಸಿಪಿ, ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ಪಕ್ಷಗಳ ಮೈತ್ರಿಯಾಗಿದ್ದು, ಬರುವ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಒಟ್ಟು 48 ಸ್ಥಾನಗಳಲ್ಲಿ ಎಮ್‌ವಿಎ 30 ಸ್ಥಾನಗಳನ್ನು ಗೆದ್ದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.