ರಾಂಚಿ: ಜಾರ್ಖಂಡ್ನ ಸೆರೈಕೆಲಾ– ಖಾರ್ಸಾ ವಾನ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಮುಂಜಾನೆ ಮುಂಬೈ–ಹೌರಾ ರೈಲಿನ 10 ಬೋಗಿಗಳು ಹಳಿತಪ್ಪಿದ ಪರಿಣಾಮ 6 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ಜಮ್ಶೆಡ್ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಮುಂಜಾನೆ 3.45 ಗಂಟೆಗೆ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

‘ಮುಂಬೈ–ಹೌರಾ ರೈಲಿನ ಹತ್ತರಿಂದ ಹನ್ನೆರಡು ಬೋಗಿಗಳು ಬಡಬ್ಯಾಂಬೂ ಬಳಿ ಹಳಿತಪ್ಪಿವೆ. ಅವಘಡದಲ್ಲಿ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಬರಬಂಬೂನಲ್ಲಿಯೇ ಪ್ರಥಮ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಕ್ರಧರಪುರಕ್ಕೆ ಕರೆದೊಯ್ಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಆಗ್ನೇಯ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ಜಾರ್ಖಂಡ್ನಲ್ಲಿ ಹಳಿ ತಪ್ಪಿದ ರೈಲು: ಇಬ್ಬರು ಸಾವು, 20 ಮಂದಿಗೆ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.