ರಾಜ್ಗಢ: ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯ ಪಿಪ್ಲೋಡಿಯಲ್ಲಿ ಭಾನುವಾರ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ತಲೆ ಮತ್ತು ಎದೆಗೆ ಗಾಯಗಳಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಭೋಪಾಲ್ಗೆ ರವಾನಿಸಲಾಗಿದೆ ಎಂದು ರಾಜ್ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್ ‘ಪಿಟಿಐ’ಗೆ ತಿಳಿಸಿದ್ದಾರೆ.

ಮೃತರನ್ನು ರಾಜಸ್ಥಾನದ ಮೋತಿಪುರ ಗ್ರಾಮದವರು ಎಂದು ಗುರುತಿಸಲಾಗಿದೆ. ಎಲ್ಲರೂ ಮದುವೆ ಸಮಾರಂಭ ನಿಮಿತ್ತ ಕುಲಂಪುರಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಘಟನಾಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.