ಗುರುಗ್ರಾಮ: ವೇಗವಾಗಿ ಬಂದ ಎಸ್‌ಯುವಿ ಕಾರು, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು , ಇಬ್ಬರು ಮಹಿಳೆಯರು ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ 7.30ರ ಸುಮಾರಿಗೆ ಗುರುಗ್ರಾಮದ ರಾಜೀವ್ ಚೌಕ್ ಅಂಡರ್‌ಪಾಸ್ ಬಳಿ ಈ ಅವಘಡ ಸಂಭವಿಸಿದೆ. ಎಸ್‌ಯುವಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಪಲ್ಟಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಅವಘಡದಲ್ಲಿ ಗಾಯಗೊಂಡ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಬೈಕ್ ಸವಾರ ಸುರೇಶ್ ಚಂದ್ (45) ಹಾಗೂ ಕಾರು ಚಾಲಕ ವಿಪಿನ್ ಯಾದವ್ (28) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಅತಿವೇಗದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಎಸಿಪಿ (ಅಪರಾಧ) ವರುಣ್ ದಹಿಯಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.