ಮುಂಬೈ: ಸ್ಫೋಟಕ ತಯಾರಿಕೆಯ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ 9 ಜನ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಾಗ್ಪುರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಈ ದುರ್ಘಟನೆಯಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಮಹಿಳೆಯರು ಮತ್ತು ಮೂವರು ಪುರುಷರು ಇದ್ದಾರೆ. ಅಮರಾವತಿ– ನಾಗ್ಪುರ ರಸ್ತೆಯ ಬಜಾರ್‌ಗಾವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸೋಲಾರ್ ಇಂಡಸ್ಟ್ರೀಸ್ ಕಾರ್ಖಾನೆಯು ಡ್ರೋನ್ ಮತ್ತು ಸ್ಫೋಟಕಗಳನ್ನು ತಯಾರಿಸಿ, ಭಾರತೀಯ ಸೇನೆಗೆ ಪೂರೈಸುತ್ತಿತ್ತು.

‘ಕಲ್ಲಿದ್ದಲು ಗಣಿಗಳಲ್ಲಿ ಬಳಸುವ ಬೂಸ್ಟರ್‌ಗಳನ್ನು ಉತ್ಪಾದಿಸುವ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ. ಉತ್ಪನ್ನಗಳನ್ನು ಸೀಲ್ ಮಾಡುವಾಗ ಸ್ಫೋಟ ಸಂಭವಿಸಿದೆ. ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ’ ಎಂದು ಸೋಲಾರ್ ಇಂಡಸ್ಟ್ರೀಸ್ ಹಿರಿಯ ಪ್ರಧಾನ ವ್ಯವಸ್ಥಾಪಕ ಆಶಿಶ್ ಶ್ರೀವಾಸ್ತವ್ ಹೇಳಿದ್ದಾರೆ.

ಮೃತರಿಗೆ ತಲಾ ₹ 5 ಲಕ್ಷ ಪರಿಹಾರವನ್ನು ಮಹಾರಾಷ್ಟ್ರ ಸರ್ಕಾರ ಘೋಷಿಸಿದ್ದು, ಮೃತರ ಅವಲಂಬಿತರಿಗೆ ಈ ಪರಿಹಾರ ನೀಡಲಿದೆ. ಘಟನೆಯ ಬಗ್ಗೆ ತನಿಖೆಗೆ ಉಪಮುಖ್ಯಮಂತ್ರಿ ದೇವೇಂದ್ರ ಪಢಣವೀಸ್ ಆದೇಶಿಸಿದ್ದಾರೆ.

ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರು ಮತ್ತು ಕಾರ್ಖಾನೆಯ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.