ಕೋಲ್ಕತ್ತ: ಇಟ್ಟಿಗೆ ಗೂಡಿನ ಚಿಮಣಿ ಕುಸಿದು ಕನಿಷ್ಠ ಮೂವರು ಕಾರ್ಮಿಕರು ಮೃತಪಟ್ಟು, 30 ಮಂದಿ ಗಾಯಗೊಂಡಿರುವ ದುರ್ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ವರದಿಯಾಗಿದೆ.

ಬಸಿರ್ಹತ್ ಪಟ್ಟಣ ಸಮೀಪದ ಧಲ್ತಿತಾಹ್ ಗ್ರಾಮದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

'ಗಾಯಾಳುಗಳು ಹಾಗೂ ಮೃತಪಟ್ಟವರು ಇಟ್ಟಿಗೆ ಗೂಡಿನಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಒಬ್ಬ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾನೆ. ಇನ್ನಿಬ್ಬರ ಶವಗಳು ಅವಶೇಷಗಳ ಅಡಿ ಪತ್ತೆಯಾಗಿವೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'20ಕ್ಕೂ ಹೆಚ್ಚು ಗಾಯಾಳುಗಳು ಬಸಿರ್ಹತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರನ್ನು ಕೋಲ್ಕತ್ತದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ' ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮೃತಪಟ್ಟವರಲ್ಲಿ ಇಬ್ಬರು ಉತ್ತರ ಪ್ರದೇಶದ ಫೈಜಾಬಾದ್‌ನವರು. ಇನ್ನೊಬ್ಬ ಸ್ಥಳೀಯ ಎಂದು ಗೊತ್ತಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಚಿಮಣಿ ಕುಸಿತಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.