ತ್ರಿಶ್ಯೂರ್ (ಕೇರಳ): ಕೇರಳದ ತ್ರಿಶ್ಯೂರ್ನಲ್ಲಿ ರಸ್ತೆಬದಿಯ ಟೆಂಟ್ಗೆ ಟ್ರಕ್ವೊಂದು ನುಗ್ಗಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು (ಮಂಗಳವಾರ) ಮುಂಜಾನೆ 4.30ರ ಸುಮಾರಿಗೆ ನಟ್ಟಿಕ ರಾಷ್ಟ್ರೀಯ ಹೆದ್ದಾರಿಯ ವಲಪಾಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಅಲೆಮಾರಿ ಜನರು ಟೆಂಟ್ ನಿರ್ಮಿಸಿಕೊಂಡು ವಾಸಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ತ್ರಿಶ್ಯೂರ್ ಸರ್ಕಾರಿ ವೈದಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಅವಘಡದಲ್ಲಿ ಒಂದೂವರೆ ವರ್ಷದ ಮತ್ತು ನಾಲ್ಕು ವರ್ಷದ ಮಗು ಮೃತಪಟ್ಟಿವೆ. ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರಕ್ ಡ್ರೈವರ್ ಮತ್ತು ಕ್ಲೀನರ್ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.