ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಟೆಂಪೊಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಇಂದು (ಶನಿವಾರ) ಮುಂಜಾನೆ 2 ಗಂಟೆ ಸುಮಾರಿಗೆ ಡೆಹರಾಡೂನ್–ನೈನಿತಾಲ್ ಹೆದ್ದಾರಿಯ ಧಂಪುರ ಬಳಿ ಅವಘಡ ಸಂಭವಿಸಿದೆ. ಜಾರ್ಖಂಡ್ನಿಂದ ವಾಪಾಸ್ಸಾಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮತ್ತೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕಾರಿನ ಚಾಲಕ ಹಿಂಬದಿಯಿಂದ ಟೆಂಪೊಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಟೆಂಪೊ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಹೇಳಿದ್ದಾರೆ.

ಅವಘಡದಲ್ಲಿ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಟೆಂಪೊ ಚಾಲಕ ಅಜಾಬ್ ಸಿಂಗ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
.ಆಸ್ಪತ್ರೆಯಲ್ಲಿ ಬೆಂಕಿ ಅವಘಡ | 10 ಮಕ್ಕಳ ಸಾವು; ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.