ಭರೂಚ್: ಗುಜರಾತ್ನ ಭರೂಚ್ ಜಿಲ್ಲೆಯಲ್ಲಿ ಟ್ರಕ್ಗೆ ವ್ಯಾನ್ ಡಿಕ್ಕಿಯಾಗಿ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಮಗ್ನಾಡ್ ಗ್ರಾಮದ ಬಳಿ ಜಂಬೂಸರ್-ಅಮೋದ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂದು ಜಂಬೂಸರ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎ.ವಿ ಪನಾಮಿಯಾ ಹೇಳಿದ್ದಾರೆ.

‘ಮಗ್ನಾಡ್ ಗ್ರಾಮದ ಬಳಿ ರಸ್ತೆಯ ಎಡಬದಿಯಲ್ಲಿ ನಿಂತಿದ್ದ ಟ್ರಕ್ಗೆ ಖಾಸಗಿ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಂಜೂಸರ್ನ ಆಸ್ಪತ್ರೆಗೆ ದಾಖಲಸಲಾಗಿದೆ‘ ಎಂದು ಅವರು ತಿಳಿಸಿದ್ದಾರೆ.

ಮೃತರನ್ನು ಜಯದೇವ್ ಗೋಹಿಲ್ (23), ಸರಸ್ವತಿ ಗೋಹಿಲ್ (21), ಹಂಸಾ ಜಾದವ್ (35), ಸಂಧ್ಯಾ ಜಾದವ್ (11), ವಿವೇಕ್ ಗೋಹಿಲ್ (16) ಮತ್ತು ಕೀರ್ತಿ ಗೋಹಿಲ್ (6) ಎಂದು ಗುರುತಿಸಲಾಗಿದೆ.

ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.