ಮುಂಬೈ: ಮರಾಠ ಸಮುದಾಯದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವ ಉದ್ದೇಶವುಳ್ಳ ‘ಮರಾಠ ಮೀಸಲಾತಿ ಮಸೂದೆ’ಯನ್ನು ಇಂದು (ಮಂಗಳವಾರ) ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಇದಾದ ಕೆಲವೇ ಹೊತ್ತಿನಲ್ಲಿ ವಿಧಾನ ಪರಿಷತ್‌ನಲ್ಲೂ ಮಸೂದೆಗೆ ಅನುಮೋದನೆ ದೊರೆತಿದೆ.

ಮರಾಠ ಮೀಸಲಾತಿಗೆ ಸಂಬಂಧಿಸಿ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶೇ 10ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಮಸೂದೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಒಪ್ಪಿಗೆ ದೊರೆತಿದ್ದು, ಕಾನೂನಾಗಿ ಜಾರಿಗೆ ಬರಲಿದೆ.

ಈ ವಿಧೇಯಕವನ್ನು ಮಂಡಿಸಲು ಇಂದು ಮಹಾರಾಷ್ಟ್ರ ಸರ್ಕಾರವು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆದಿತ್ತು.
.ಮಹಾರಾಷ್ಟ್ರ: ಶೇ 10ರಷ್ಟು ಮರಾಠ ಮೀಸಲು ಮಸೂದೆಗೆ ‘ಅಸ್ತು’.ಆಳ–ಅಗಲ | ಮೀಸಲಾತಿ: ಶೇ 50ರ ಮಿತಿಗೆ ವಿನಾಯಿತಿಯೂ ಇದೆ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.