ಹೈದರಾಬಾದ್: ನಗರದ ಹೊರವಲಯದ ಶಂಶಾಬಾದ್‌ನಲ್ಲಿ ನಿರ್ಮಿಸಲಾಗಿದ್ದ ಮಸೀದಿಯೊಂದನ್ನು ನಗರಪಾಲಿಕೆ ಅಧಿಕಾರಿಗಳು ನೆಲಸಮಗೊಳಿಸಿದ್ದು, ಸ್ಥಳೀಯ ಮುಸ್ಲಿಮರು ಪ್ರತಿಭಟನೆ ನಡೆಸಿದ್ದಾರೆ.

ಗ್ರೀನ್ ಅವಿನ್ಯೂ ಕಾಲನಿಯಲ್ಲಿ ನಿರ್ಮಿಸಲಾಗಿದ್ದ ಮಸ್ಜಿದ್–ಇ–ಖಾಜಾ ಮಹ್ಮೂದ್ ಮಸೀದಿಯನ್ನು ನಗರಪಾಲಿಕೆ ಅಧಿಕಾರಿಗಳು, ಬಿಗಿ ಪೊಲೀಸ್ ಭದ್ರತೆಯಲ್ಲಿ ಮಂಗಳವಾರ ಬೆಳಗ್ಗೆ ನೆಲಸಮ ಮಾಡಿದ್ದಾರೆ.

ಮಸೀದಿ ನೆಲಸಮ ಕಾರ್ಯಾಚರಣೆಯನ್ನು ವಿರೋಧಿಸಿ ಆಲ್ ಇಂಡಿಯಾ ಮಜ್ಲಿಸ್–ಇ–ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮತ್ತು ಮಜ್ಲಿಸ್ ಬಚಾವೊ ತೆಹ್ರೀಕ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮಸೀದಿಯನ್ನು ನಿಗದಿತವಲ್ಲದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಗ್ರೀನ್ ಅವಿನ್ಯೂ ಕಾಲನಿಯ ನಿವಾಸಿಗಳು ಶಂಶಾಬಾದ್ ನಗರಪಾಲಿಕೆಗೆ ದೂರು ನೀಡಿದ್ದರು.

ಉತ್ತರಪ್ರದೇಶ: 841 ಸರ್ಕಾರಿ ವಕೀಲರ ವಜಾಗೊಳಿಸಿದ ಸಿಎಂ ಯೋಗಿ ಆದಿತ್ಯನಾಥ

ಮಸೀದಿಯನ್ನು ಅನಧಿಕೃತವಾಗಿ ನಿರ್ಮಿಸಿರುವ ಕುರಿತು ದೂರು ಬಂದ ಬಳಿಕ, ಪಾಲಿಕೆ ಅಧಿಕಾರಿಗಳು ನೆಲಸಮ ಮಾಡುವ ಕಾರ್ಯಾಚರಣೆ ನಡೆಸಿದ್ದರು. ಆದರೆ, ಪಾಲಿಕೆ ಕಾರ್ಯಾಚರಣೆಗೆ ಸ್ಥಳೀಯ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಲಾಗುವುದು: ಅಮಿತ್ ಶಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.