ನವದೆಹಲಿ : ಪ್ರತಿ ವಿಧಾನಸಭಾ ಕ್ಷೇತ್ರದ ಶೇ 50ರಷ್ಟು ವಿವಿಪ್ಯಾಟ್ ಮತಚೀಟಿಗಳನ್ನು ಮತಯಂತ್ರಗಳಿಗೆ ತಾಳೆ ಮಾಡುವ ತಮ್ಮ ಬೇಡಿಕೆಗೆ ಸಂಬಂಧಿಸಿದಂತೆ ನೀಡಿರುವ ಸೂಚನೆಯನ್ನು ಮರು ಪರಿಶೀಲಿಸುವಂತೆ 21 ರಾಜಕೀಯ ಪಕ್ಷಗಳು ಸಲ್ಲಿಸಿರುವ ಅರ್ಜಿಯನ್ನು ಮುಂದಿನ ವಾರ ವಿಚಾರಣೆಗೆ ಎತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಪ್ರತಿ ವಿಧಾನಸಭಾ ಕ್ಷೇತ್ರದ ಶೇ 50ರಷ್ಟು ಮತಗಟ್ಟೆಗಳ ವಿವಿಪ್ಯಾಟ್ ಮತಚೀಟಿಗಳನ್ನು ಮತಯಂತ್ರಕ್ಕೆ ತಾಳೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕು ಎಂದು 21 ರಾಜಕೀಯ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದವು. ಆ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು, ತಾಳೆಮಾಡುವ ವಿವಿಪ್ಯಾಟ್‌ಗಳ ಸಂಖ್ಯೆಯನ್ನು ಹೆಚ್ಚಿಸಿದರೆ ಫಲಿತಾಂಶ ಘೋಷಣೆಗೆ ವಿಳಂಬವಾಗಬಹುದೆಂಬ ಕಾರಣಕ್ಕೆ, ಪ್ರತಿ ವಿಧಾನಸಭಾ ಕ್ಷೇತ್ರದ ಕನಿಷ್ಠ ಐದು ತಗಟ್ಟೆಗಳ ವಿವಿಪ್ಯಾಟ್‌ಗಳನ್ನು ಮತಯಂತ್ರಕ್ಕೆ ತಾಳೆ ಮಾಡುವಂತೆ ಏಪ್ರಿಲ್ 8ರಂದು ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಇದರಿಂದ ಸಂತೃಪ್ತರಾಗದ ವಿರೋಧಪಕ್ಷಗಳವರು ಏ.8ರ ಸೂಚನೆಯನ್ನು ಮರು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಪುನಃ ಅರ್ಜಿ ಸಲ್ಲಿಸಿದ್ದವು. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.