ಬಲ್ಲಿಯಾ (ಉತ್ತರ ಪ್ರದೇಶ): ಇಲ್ಲಿನ ದೇವಸ್ಥಾನವೊಂದರಲ್ಲಿ ಮಾಂಸ ಪತ್ತೆಯಾಗಿದ್ದು, ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನ ಮಾಲ್ದಾ ಚಟ್ಟಿ ಪ್ರದೇಶದ ಹನುಮಾನ್ ದೇವಸ್ಥಾನದಲ್ಲಿ ಮಾಂಸದ ತುಂಡು ಪತ್ತೆಯಾಗಿದೆ ಎಂದು ಸಿಕಂದರಪುರ ಪೊಲೀಸ್ ಠಾಣೆ ಎಸ್‌ಎಚ್‌ಒ ದಿನೇಶ್ ಪಾಠಕ್ ತಿಳಿಸಿದ್ದಾರೆ.

ದೇವಸ್ಥಾನದಲ್ಲಿ ಮಾಂಸವನ್ನು ಕಂಡ ಭಕ್ತರು ಸಿಟ್ಟಿಗೆದ್ದು, ಸಿಕಂದರಪುರ-ಬೆಲ್ತ್ರಾ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಿಂದೂ ಬಲಪಂಥೀಯ ಗುಂಪಿನ ಪದಾಧಿಕಾರಿ ಅಂಬರ್ ಪಾಂಡೆ ಎಂಬುವವರು ನೀಡಿದ ದೂರಿನ ಮೇರೆಗೆ ರಾಮ್ ದಯಾಳ್, ರಾಮ್ ನಿವಾಸ್, ಕಮಾಲುದ್ದೀನ್ ಹಾಗೂ ಮಂಜೂರ್ ಎಂಬುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಆರಾಧನಾ ಸ್ಥಳ ಅಪವಿತ್ರ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಾಠಕ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.