ಚೆನ್ನೈ: ಅಖಿಲ ಭಾರತೀಯ ಕೋಟಾದಡಿ ವೈದ್ಯಕೀಯ ಶಿಕ್ಷಣ ಪ್ರವೇಶಾತಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಕೈಗೊಳ್ಳಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸುವಂತೆ ಮದ್ರಾಸ್ ಹೈಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮೂರು ತಿಂಗಳ ಒಳಗಾಗಿ ಕೇಂದ್ರ, ರಾಜ್ಯ ಮತ್ತು ಭಾರತೀಯ ವೈದ್ಯಕೀಯ ಮಂಡಳಿಯ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರಚಿಸುವಂತೆ ನ್ಯಾಯಾಲಯ ಸೂಚಿಸಿದೆ.

ಈ ಸಮಿತಿ ನೀಡುವ ತೀರ್ಮಾನಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಅನ್ವಯವಾಗಲಿವೆ ಎಂದುನ್ಯಾಯಮೂರ್ತಿಗಳಾದ ಎ.ಪಿ ಸಾಹಿ ಮತ್ತು ಸೇಂಥಿಲ್‌ಕುಮಾರ್ ರಾಮಮೂರ್ತಿ ಅವರನ್ನು ಒಳಗೊಂಡ ಪೀಠ ತಿಳಿಸಿದೆ.

ವೈದ್ಯಕೀಯ ಶಿಕ್ಷಣ ಪ್ರವೇಶಾತಿ ಬಯಸುವ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅಖಿಲ ಭಾರತ ಮಟ್ಟದ ಕೋಟಾದಡಿ ಮೀಸಲಾತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ತಮಿಳುನಾಡಿನ ಡಿಎಂಕೆ, ಎಐಎಡಿಎಂಕೆ, ಪಿಎಂಕೆ ಮತ್ತು ಇತರೆ ಪಕ್ಷಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಕೇಂದ್ರಕ್ಕೆ ಈ ನಿರ್ದೇಶನ ನೀಡಿದೆ.

ಭಾರತೀಯ ವೈದ್ಯಕೀಯ ಮಂಡಳಿಯ ವಾದದಂತೆ ಅಖಿಲ ಭಾರತೀಯ ಮಟ್ಟದ ಕೋಟಾದಡಿ ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವಲ್ಲಿ ಯಾವುದೇ ಕಾನೂನು ಅಡೆತಡೆ ಇಲ್ಲ.‘ಮೀಸಲಾತಿ‘ ಎನ್ನುವುದು ಕಾನೂನಾತ್ಮಕ ಅಥವಾ ಮೂಲಭೂತ ಹಕ್ಕಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದ್ದರಿಂದ ಜನರಮೂಲಭೂತ ಹಕ್ಕುಗಳಿಗೆ ಧಕ್ಕೆಯಾದಂತಹ ಸಂದರ್ಭಗಳನ್ನು ಹೊರತುಪಡಿಸಿ, ಸರ್ಕಾರದ ನೀತಿ ನಿರೂಪಣೆಯ ವಿಚಾರದಲ್ಲಿ ನ್ಯಾಯಾಲಯ ಅನಗತ್ಯವಾಗಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ.

ಮೀಸಲಾತಿ ಸಂಬಂಧ ಕೇಂದ್ರದ ನಿರ್ಧಾರ ಪ್ರಶ್ನಿಸಿ ವಿವಿಧ ಪಕ್ಷಗಳು ಸಲ್ಲಿಸಿದ ಅರ್ಜಿಯನ್ನು ತಳ್ಳಿ ಹಾಕಿದ ನ್ಯಾಯಾಲಯ, ಅಖಿಲ ಭಾರತ ಮಟ್ಟದ ವೈದ್ಯಕೀಯ ಪ್ರವೇಶಾತಿಯಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.