ತಿರುವನಂತಪುರ: ಕೇರಳದ ತಿರುವನಂತಪುರ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಶಹಾನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.

ವರದಕ್ಷಿಣೆ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಪ್ರಿಯಕರ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಕೇರಳದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಡಾ.ರುವೈಸಾ ಅವರನ್ನು ಕರುನಾಗಪಲ್ಲಿಯಲ್ಲಿ ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆರೋಪಿ ಡಾ. ರುವೈಸಾ ಅವರನ್ನು ವೈದ್ಯಕೀಯ ಕಾಲೇಜು ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಕಚೇರಿ ತಿಳಿಸಿದೆ.

ಆರೋಪಿ ರುವೈಸಾ ಮತ್ತು ಆತನ ಸಂಬಂಧಿಕರ ಅತಿಯಾದ ವರದಕ್ಷಿಣೆ ಬೇಡಿಕೆಯಿಂದ ಖಿನ್ನತೆಗೆ ಒಳಗಾಗಿ ಶಹಾನಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆಯ ಕುಟುಂಬದವರು ಆರೋಪಿಸಿದ್ದಾರೆ. ಅವರ ಹೇಳಿಕೆಗಳು ಮತ್ತು ಸಂತ್ರಸ್ತೆ ಬರೆದಿರುವ ಮರಣ ಪತ್ರ ಆಧರಿಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ವರದಕ್ಷಿಣೆಯಾಗಿ ಕಾರು, ಚಿನ್ನಕ್ಕೆ ಬೇಡಿಕೆ: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ.
ಶಹಾನಾ ಅವರು ಡಾ.ರುವೈಸಾ ಎನ್ನುವ ಯುವಕನನ್ನು ಪ್ರೀತಿಸಿದ್ದರು. ಮದುವೆ ಮಾತುಕತೆ ವೇಳೆ ಶಹಾನಾ ಕುಟುಂಬದ ಬಳಿ ಯುವಕನ ಕುಟುಂಬ 150 ಪವನ್ ಚಿನ್ನ, 15 ಎಕರೆ ಜಾಗ ಮತ್ತು ಬಿಎಂಡಬ್ಲ್ಯೂ ಕಾರನ್ನು ವರದಕ್ಷಿಣೆಯಾಗಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಆದರೆ ಕುಟುಂಬ ಅಷ್ಟೊಂದು ವರದಕ್ಷಿಣೆ ನೀಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ಯುವಕ ಮತ್ತು ಆತನ ಕುಟುಂಬದವರು ಮದುವೆಯನ್ನು ನಿರಾಕರಿಸಿದ್ದರು. ಇದರಿಂದ ಮನನೊಂದ ಶಹಾನಾ ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್‌ನಲ್ಲಿ ‘ಎಲ್ಲರಿಗೂ ಹಣ ಮಾತ್ರ ಬೇಕು’ ಎಂದು ಬರೆದಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.