ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳ ಅನುಷ್ಠಾನದ ಬಗ್ಗೆ ಪರಿಶೀಲಿಸಲು ಬಿಜೆಪಿ ಮೋರ್ಚಾಗಳ ಉನ್ನತ ಪದಾಧಿಕಾರಿಗಳ ಸಭೆ ಶನಿವಾರ ನಡೆಯಿತು.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಹಿಸಿದ್ದರು.

ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ ಸಿದ್ಧತೆ ಮತ್ತು ಕಾರ್ಯತಂತ್ರದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಸಾರ್ವತ್ರಿಕ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯ ಏಳು ಮೋರ್ಚಾಗಳಿಗೆ ನೀಡಲಾದ ಜವಾಬ್ದಾರಿಗಳ ಅನುಷ್ಠಾನದ ಸ್ಥಿತಿಯನ್ನು ಸಹ ಪರಿಶೀಲಿಸಲಾಗಿದೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಬನ್ಸಾಲ್, ವಿನೋದ್ ತಾವ್ಡೆ, ರಾಧಾಮೋಹನ್ ದಾಸ್ ಅಗರವಾಲ್, ದುಷ್ಯನ್ ಗೌತಮ್ ಮತ್ತು ವಿ. ಸತೀಶ್ ಅವರಲ್ಲದೆ ಬಿಜೆಪಿಯ ಎಲ್ಲಾ ಏಳು ಮೋರ್ಚಾಗಳ ಉನ್ನತ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.