ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನವದೆಹಲಿಯಲ್ಲಿ ಇದೇ 16ರಂದು ನಡೆಯಲಿದೆ. ಈ ಸಭೆಯ ಕಾರ್ಯಸೂಚಿಯಲ್ಲೂ ಮೇಕೆ ದಾಟು ಜಲಾಶಯ ನಿರ್ಮಾಣದ ವಿಸ್ತೃತ ಯೋಜನಾ ವರದಿಯ ವಿಚಾರ ಸೇರ್ಪಡೆ ಯಾಗಿಲ್ಲ.

‘ಮೇಕೆದಾಟು ಸಮತೋಲನ ಜಲಾಶಯ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಸಲ್ಲಿಸಿರುವ ಯೋಜನಾ ವರದಿ ಕುರಿತು ಪ್ರಾಧಿಕಾರ ಚರ್ಚೆ ನಡೆಸಬಹುದು. ಆದರೆ, ಈ ಪ್ರಸ್ತಾವನೆ ಆಧಾರದಲ್ಲಿ ಅಧಿಕೃತವಾಗಿ ಯಾವುದೇ ಅಭಿಪ್ರಾ ಯಕ್ಕೆ ಬರುವಂತಿಲ್ಲ’ ಎಂದು ಸುಪ್ರೀಂಕೋರ್ಟ್ 2022ರ ಜುಲೈನಲ್ಲಿ ನಿರ್ದೇಶನ ನೀಡಿತ್ತು.

‘ಕಾವೇರಿ ಜಲವಿವಾದ ನ್ಯಾಯಾ ಧೀಕರಣದ ಮಾರ್ಪಾಡಾಗಿರುವ ಅಂತಿಮ ತೀರ್ಪಿನ ಪ್ರಕಾರ, ಮೇಕೆದಾಟು ಯೋಜನೆ ಕುರಿತು ಪ್ರಾಧಿಕಾರಕ್ಕೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇದೆ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕಳೆದ ಜುಲೈನಲ್ಲಿ ಅಭಿಪ್ರಾಯ ನೀಡಿದ್ದರು. ಆ ಬಳಿಕ ಪ್ರಾಧಿಕಾರ 5 ಸಭೆ ನಡೆಸಿದೆ. ಯಾವುದೇ ಸಭೆಯ ಕಾರ್ಯಸೂಚಿ ಪಟ್ಟಿಗೆ ಇದು ಸೇರ್ಪಡೆಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.