ಕೋಲ್ಕತ್ತಾ: ವ್ಯಕ್ತಿಯೊಬ್ಬ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಕೋಲ್ಕತ್ತಾದಲ್ಲಿ ಮೆಟ್ರೊ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.

ಸವಾಬಜಾರ್– ಸುತನುತಿ ನಿಲ್ದಾಣಗಳ ನಡುವೆ ಸಂಚರಿಸುವ ರೈಲು ಸಂಚಾರ 40 ನಿಮಿಷ ಸ್ಥಗಿತಗೊಂಡಿತ್ತು.

ರೈಲು ಬರುವ ವೇಳೆ 30 ವರ್ಷದ ವ್ಯಕ್ತಿ ಹಳಿಗೆ ಹಾರಿದ್ದಾನೆ. ತಕ್ಷಣವೇ ರೈಲನ್ನು ನಿಲ್ಲಿಸಲಾಗಿದ್ದು, ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೋಲ್ಕತ್ತಾ ಮೆಟ್ರೊ ವಕ್ತಾರ ತಿಳಿಸಿದ್ದಾರೆ.

ಮಧ್ಯಾಹ್ನ 12.45ರ ಹೊತ್ತಿಗೆ ಘಟನೆ ನಡೆದಿದೆ, ಮುಕ್ಕಾಲು ಗಂಟೆಗಳ ಬಳಿಕ ರೈಲು ಸಂಚಾರ ಆರಂಭವಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿಯೂ ಮೆಟ್ರೊ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಗಳು ವರದಿಯಾಗಿದೆ. ಅಲ್ಲದೆ ಅತ್ತಿಗುಪ್ಪೆ ಮೆಟ್ರೊ ನಿಲ್ದಾಣದಲ್ಲಿ ಯುವಕನೊಬ್ಬ ಹಳಿಗೆ ಹಾರಿ ಪ್ರಾಣಬಿಟ್ಟ ಘಟನೆಯೂ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.