ನವದೆಹಲಿ: ಸೇವೆಯಲ್ಲಿರುವಾಗ ಆಕಸ್ಮಿಕವಾಗಿ ಸಾವಿಗೀಡಾದ ಅಥವಾ ವೈದ್ಯಕೀಯ ಕಾರಣಗಳಿಗಾಗಿ ನಿವೃತ್ತಿ ಹೊಂದುವ ತನ್ನ ಉದ್ಯೋಗಿಗಳ ಅವಲಂಬಿತರಿಗೆ ಅನುಕಂಪದ ನೌಕರಿ ನೀಡುವ ನೀತಿಯಲ್ಲಿ ಕೇಂದ್ರ ಗೃಹ ಸಚಿವಾಲಯವು ಕೆಲವು ಮಾರ್ಪಾಡುಗಳನ್ನು ಮಾಡಿದೆ.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಉದ್ಯೋಗಿಗಳಿಗೆ ಈ ನಿಯಮವು ಅನ್ವಯವಾಗಲಿದೆ. ಈ ಹೊಸ ನೀತಿಯು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿದೆ.

ಗೃಹ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ‘ಆರ್ಥಿಕವಾಗಿ ಅಹಾಯಕತೆಯಿಂದ ಬಳಲುತ್ತಿರುವ ನೌಕರನ ಕುಟುಂಬಕ್ಕೆ ತುರ್ತು ನೆರವು ನೀಡಲು ಅನುಕಂಪ ಆಧಾರಿತ ನೌಕರಿ ನೀಡಲಾಗುತ್ತದೆ. ಹೊಸ ಮಾರ್ಗಸೂಚಿಗಳು ನೌಕರಿಯ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ವಸ್ತುನಿಷ್ಠತೆಯನ್ನು ಹೊಂದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ಮಾರ್ಗಸೂಚಿಗಳು ಕುಟುಂಬದ ಆರ್ಥಿಕ ಸ್ಥಿತಿ, ಉದ್ಯೋಗ ಮಾಡುತ್ತಿರುವವರ ಸಂಖ್ಯೆ, ಕುಟುಂಬದ ಗಾತ್ರ, ಮಕ್ಕಳ ವಯಸ್ಸು ಮತ್ತು ಕುಟುಂಬದ ಆರ್ಥಿಕ ಸ್ಥಿತಿಯ ಅಗತ್ಯವನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುವ ಅಂಶಗಳನ್ನು ಒಳಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.