ನವದೆಹಲಿ: ಗಿರಿಧಾಮಗಳು, ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ದೇಶದ ವಿವಿಧೆಡೆ ಕೋವಿಡ್ –19 ನಿಯಮಗಳನ್ನು ಉಲ್ಲಂಘಿಸಲಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹಸಚಿವಾಲಯವು ಬುಧವಾರ ಸೂಚನೆ ನೀಡಿದೆ.

ಈ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, ‘ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೂ ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ. ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ಭಾರಿ ಸಂಖ್ಯೆಯಲ್ಲಿ ಗುಂಪುಗೂಡುತ್ತಿದ್ದು, ದೈಹಿಕ ಅಂತರವನ್ನೇ ಮರೆತಿದ್ದಾರೆ. ಕೋವಿಡ್ನ 2ನೇ ಅಲೆ ಇನ್ನೂ ಮುಕ್ತಾಯವಾಗಿಲ್ಲ ಎಂಬುದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಡಬೇಕು. ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದರಿಂದ ಬಹುತೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸಿವೆ. ಆದರೆ, ಕೋವಿಡ್ ನಿಯಮ ಸಡಿಲಿಕೆ ಮಾಡುವಾಗ ಎಚ್ಚರಿಕೆಯ ಕ್ರಮಗಳನ್ನೂ ಗಮನದಲ್ಲಿರಿಸಿಕೊಳ್ಳಬೇಕು’ ಎಂದು ಅಜಯ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ... ಪ್ರಧಾನಿ ಮೋದಿ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ: ಸಿದ್ದರಾಮಯ್ಯ ಪ್ರಶ್ನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.