ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ಪ್ರಯೋಗಾಲಯದ ತಂತ್ರಜ್ಞನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕೃತ್ಯ ನಡೆದಿದ್ದು, ಕಳೆದ ವಾರ ಚಿಕಿತ್ಸೆಗೆ ದಾಖಲಾಗಿದ್ದ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ.

‘ಪ್ರಯೋಗಾಲಯದಿಂದ ಬಾಲಕಿ ಅಳುತ್ತಾ ಹೊರಬಂದಳು. ಟೆಕ್ನಿಷಿಯನ್ ದೇಹವನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದು, ಹೊರಗೆ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದಿತು ಎಂದು ಬೆದರಿಕೆ ಒಡ್ಡಿದ್ದ’ ಎಂದು ಕುಟುಂಬ ಸದಸ್ಯರೊಬ್ಬರು ಇಳಿಸಿದರು.

ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಘಟನೆ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸೂಪರಿಂಟೆಂಡೆಂಟ್ ರಾಜೀನಾಮೆಗೆ ಆಗ್ರಹಪಡಿಸಿ ಡಿವೈಎಫ್‌ಐ ಸದಸ್ಯರು ಪ್ರತಿಭಟನೆ ನಡೆಸಿದರು.

ಅತ್ಯಾಚಾರ ಆರೋಪಿಗಳಿಗೆ ಜಾಮೀನು, ಉ.ಪ್ರ ಸರ್ಕಾರದ ಮೇಲೆ ವಾಗ್ದಾಳಿ

ಲಖನೌ: ಐಐಟಿ–ಬಿಎಚ್‌ಯುವಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಕೃತ್ಯದ ಇಬ್ಬರು ಆರೋಪಿಗಳು ಜಾಮೀನಿನ ಮೆಲೆ ಬಿಡುಗಡೆ ಆಗಿರುವುದಕ್ಕೆ ವಿರೋಧಪಕ್ಷಗಳು ಭಾನುವಾರ ಉತ್ತರ ಪ್ರದೇಶ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿವೆ. ಮಹಿಳಾ ಸುರಕ್ಷತೆಗೆ ಕುರಿತು ಬಿಜೆಪಿ ಸರ್ಕಾರದ ಬೂಟಾಟಿಕೆ ಇದರಿಂದ ಬಯಲಾಗಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ‘ಎಕ್ಸ್’ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ ದುರ್ಬಲ ವಾದವೇ ಆರೋಪಿಗಳಿಗೆ ಜಾಮೀನು ಸಿಗಲು ಕಾರಣ ಎಂದು ಬಿಂಬಿಸುವ ವಿಡಿಯೊ ಅನ್ನು ಅವರು ಹಂಚಿಕೊಂಡಿದ್ದಾರೆ. ಜೈಲಿನಿಂದ ಬಿಡುಗಡೆ ಬಳಿಕ ಆರೋಪಿಗಳಾದ ಅಭಿಷೇಕ್ ಚೌಹಾಣ್ ಮತ್ತು ಕುನಾಲ್ ಪಾಂಡೆ ಅವರಿಗೆ ದೊರೆತ ಸ್ವಾಗತ ಮತ್ತು ಕೇಕ್ ಕತ್ತರಿಸಿ ಸಂಭ್ರಮಿಸಿರುವ ವಿಡಿಯೊ ಜಾಲತಾಣದಲ್ಲಿ ಸಾಕಷ್ಟು ಹಂಚಿಕೆಯಾಗಿತ್ತು. ಅಲಹಾಬಾದ್ ಹೈಕೋರ್ಟ್ ಈ ಇಬ್ಬರಿಗೂ ಜಾಮೀನು ಮಂಜೂರು ಮಾಡಿತ್ತು. ಬಿಜೆಪಿಯ ರಾಜಕಾರಣ ಮತ್ತು ಆಡಳಿತಶೈಲಿಯಿಂದ ಜನತೆ ರೋಸತ್ತಿದ್ದಾರೆ ಎಂದು ಅಖಿಲೇಶ್ ಯಾದವ್ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.