ನವದೆಹಲಿ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ ಬಾಲಕ ಸೇರಿದಂತೆ ಇಬ್ಬರನ್ನು ದೆಹಲಿ ಪೊಲೀಸರು ಮಂಗಳವಾರ ವಶಕ್ಕೆ ಪಡೆದು, ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಮಾರ್ಚ್ 18ರಂದು ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ, ಆಕೆಯ ನೆರೆಹೊರೆಯವರೇ ಆದ ಈ ಇಬ್ಬರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ದೂರು ದಾಖಲಿಸಿದ್ದರು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

‘ತನಿಖೆ ಕೈಗೊಂಡ ಪೊಲೀಸರು ಜುನೈದ್ ಖಾನ್ (25) ಎಂಬಾತನನ್ನು ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ’ ಎಂದು ಉತ್ತರ ದೆಹಲಿ ವಿಭಾಗದ ಡಿಸಿಪಿ ಎಂ.ಕೆ.ಮೀನಾ ಹೇಳಿದ್ದಾರೆ.

‘ಕೃತ್ಯ ಎಸಗಿದ ನಂತರ ಆರೋಪಿಯು ಪದೇ ಪದೇ ತನ್ನ ಮೊಬೈಲ್ ಸಂಖ್ಯೆಯನ್ನು ಬದಲಿಸಿದ್ದಾನೆ. ಇದನ್ನು ಬೆನ್ನು ಹತ್ತಿದ ಪೊಲೀಸರು ಈತನ ಚಲನವಲನದ ಮೇಲೆ ನಿಗಾ ಇರಿಸಿದ್ದರು. ಆತ ಪರಾರಿಯಾದ ನಂತರ ಹಲವು ಕಡೆ ಪೊಲೀಸರು ಶೋಧ ಕಾರ್ಯವನ್ನೂ ನಡೆಸಿದ್ದರು. ನಂತರ ಈ ಇಬ್ಬರನ್ನು ಬಂಧಿಸಲಾಗಿದೆ. ಖಾನ್ ಹಾಗೂ ಬಾಲಕ ತಾವು ಕೃತ್ಯ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ’ ಎಂದು ಡಿಸಿಪಿ ಮೀನಾ ಹೇಳಿದ್ದಾರೆ.

ಈ ಪ್ರಕರಣವೊಂದೇ ಅಲ್ಲದೆ, ಖಾನ್ ವಿರುದ್ಧ 20 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಸರಗಳ್ಳತನ, ಮನೆಗಳ್ಳತನ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ ಎಂಬ ಮಾಹಿತಿಯನ್ನೂ ಪೊಲೀಸರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.