ಐಜ್ವಾಲ್: ಈಶಾನ್ಯ ರಾಜ್ಯಗಳಾದ ಮಿಜೋರಾಂ ಮತ್ತು ಅಸ್ಸಾಂ ನಡುವೆ ದೀರ್ಘಕಾಲದಿಂದ ಇರುವ ಗಡಿ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಂಟಿ ಪ್ರಯತ್ನ ನಡೆಸಲು ಉಭಯ ರಾಜ್ಯಗಳು ಒಪ್ಪಿಕೊಂಡಿವೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಸದ್ಯ ಗುವಾಹಟಿಯಲ್ಲಿರುವ ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಶುಕ್ರವಾರ ಭೋಜನ ಕೂಟಕ್ಕೆ ಆಹ್ವಾನಿಸಿ, ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಿದರು.

ಮಿಜೋರಾ ಮತ್ತು ಅಸ್ಸಾಂ ನಡುವಿನ ಗಡಿ ವಿವಾದವು 2021ರ ಜುಲೈನಲ್ಲಿ ಉಗ್ರ ಸ್ವರೂಪ ಪಡೆದಿತ್ತು. ಎರಡೂ ಕಡೆಯ ಪೊಲೀಸ್ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಸಂಘರ್ಷದಲ್ಲಿ ಅಸ್ಸಾಂನ ಆರು ಮಂದಿ ಪೊಲೀಸರು ಹಾಗೂ ಒಬ್ಬ ನಾಗರಿಕ ಸಾವನ್ನಪ್ಪಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.