ಶ್ರೀನಗರ: ಬಾರಾಮುಲ್ಲಾದ ಉರಿ ಸೆಕ್ಟರ್ನಲ್ಲಿ ಮೊಬೈಲ್ ದೂರವಾಣಿ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಗಡಿ ನಿಯಂತ್ರಣ ರೇಖೆಯಲ್ಲಿ ಅನುಮಾನಾಸ್ಪದ ಚಲನವಲನ ಪತ್ತೆಯಾದ ಹಿನ್ನೆಲೆಯಲ್ಲಿ ಸೇನೆಯ ಕೂಂಬಿಂಗ್ ಕಾರ್ಯಾಚರಣೆಗೆ ನೆರವಾಗಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್ 18ರ ಮಧ್ಯರಾತ್ರಿ ಉರಿ ವಲಯದ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆಯು ಅನುಮಾನಾಸ್ಪದ ಚಲನೆಯನ್ನು ಪತ್ತೆ ಮಾಡಿದ್ದು, ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಸೇನೆಯು ತನ್ನ ಕೂಂಬಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ ಎಂದು ಅವರು ಹೇಳಿದ್ದಾರೆ.

ಎರಡನೇ ದಿನವೂ ಕಾರ್ಯಾಚರಣೆ ತೀವ್ರತೆ ಪಡೆದಿದ್ದು, ನುಸುಳುಕೋರರನ್ನು ಪತ್ತೆಹಚ್ಚಲು ಸೇನೆ ಶೋಧ ನಡೆಸುತ್ತಿದೆ ಎಂದು ಅಧಿಕಾರಿತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.