ನವದೆಹಲಿ: 'ಜಾತಿ ಗಣತಿ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯ ಕಾಡುತ್ತಿದೆ. ಏಕೆಂದರೆ ಎಲ್ಲರೂ ತಮ್ಮ ತಮ್ಮ ಪಾಲು ಕೇಳಲು ಪ್ರಾರಂಭಿಸುತ್ತಾರೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಮಂಗಳವಾರ) ಆರೋಪಿಸಿದ್ದಾರೆ.

'ಸಂವಿಧಾನ ದಿನ' ಕಾರ್ಯಕ್ರಮ ಉದ್ದೇಶಿಸಿ ಖರ್ಗೆ ಮಾತನಾಡಿದರು.

'ನಿಜವಾಗಿಯೂ ದೇಶದಲ್ಲಿ ಏಕತೆ ಸಾಧಿಸಬೇಕಾದರೆ ದ್ವೇಷ ಹರಡುವುದನ್ನು ನಿಲ್ಲಿಸಬೇಕು ಎಂದು ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಅವರು ಕಿಡಿ ಕಾರಿದ್ದಾರೆ.

ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವವು ಕೇವಲ ಆದರ್ಶಗಳಲ್ಲ. ಅವುಗಳು 140 ಕೋಟಿ ಭಾರತೀಯರ ಜೀವನದ ಮಾರ್ಗವಾಗಿದೆ ಎಂದು ಹೇಳಿದ್ದಾರೆ.

ಸಂವಿಧಾನದ ಮೌಲ್ಯಗಳನ್ನು ರಕ್ಷಿಸುವ ಮಹತ್ತರವಾದ ಕೆಲಸ ದೇಶಪ್ರೇಮಿಗಳ ಮುಂದಿದೆ. ಅದಕ್ಕಾಗಿ ಇಡೀ ದೇಶವೇ ಒಂದಾಗಬೇಕು ಎಂದು ಅವರು ಕರೆ ನೀಡಿದ್ದಾರೆ.

ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬಳಸಬೇಕು: ಖರ್ಗೆ

ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆಯನ್ನು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಅಲ್ಲದೆ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
.ಕಾಂಗ್ರೆಸ್ಗೆ ಸಂವಿಧಾನ, ಅಂಬೇಡ್ಕರ್ ಬಗ್ಗೆ ತಿರಸ್ಕಾರವಿತ್ತು: ಬೊಮ್ಮಾಯಿ.ಅದಾನಿಯನ್ನು ಈಗಲೇ ಬಂಧಿಸಿ, ಸೆಬಿ ಮುಖ್ಯಸ್ಥರನ್ನು ತನಿಖೆಗೊಳಪಡಿಸಿ: ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.