ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಪುರೋಹಿತ (ಸನ್ಯಾಸಿ) ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ನಾಯಕ ಚಿನ್ಮಯ್ ಕೃಷ್ಣದಾಸ್ ಬ್ರಹ್ಮಚಾರಿ ಅವರ ಬಂಧನವನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆ ನೀಡಿದೆ.

ಬಾಂಗ್ಲಾದೇಶದಲ್ಲಿ ಸಮ್ಮಿಳಿತ ಸನಾತನ ಜಾಗರಣ ವೇದಿಕೆ ವಕ್ತಾರರೂ ಆಗಿರುವ ಚಿನ್ಮಯ್ ಕೃಷ್ಣದಾಸ್ ಅವರ ಬಂಧನ ಮತ್ತು ಜಾಮೀನು ನಿರಾಕರಣೆ ವಿಚಾರವನ್ನು ನಾವು ತೀವ್ರ ಕಳವಳದಿಂದ ಗಮನಿಸಿದ್ದೇವೆ. ಈ ಘಟನೆಯು ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಗಳಿಗೆ ಮತ್ತಷ್ಟು ಪ್ರಚೋದನೆ ನೀಡಿದಂತಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬೇಸರ ಹೊರಹಾಕಿದೆ.

‘ಕೆಲವು ದಿನಗಳ ಹಿಂದೆ ಹಿಂದೂ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಜತೆಗೆ, ಅಲ್ಪಸಂಖ್ಯಾತರ ಮನೆಗಳು, ಅಂಗಡಿಗಳಿಗೆ ಬೆಂಕಿ ಹಚ್ಚುವುದು ಮತ್ತು ಲೂಟಿ ಮಾಡಿರುವ ಹಲವು ಪ್ರಕರಣಗಳು ವರದಿಯಾಗಿವೆ. ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಜರುಗಿಸದ ಬಾಂಗ್ಲಾ ಸರ್ಕಾರ, ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರನ್ನು ಬಂಧಿಸುವುದು ಎಷ್ಟು ಸರಿ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಶ್ನಿಸಿದೆ.

‘ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬಾಂಗ್ಲಾ ಅಧಿಕಾರಿಗಳನ್ನು ಒತ್ತಾಯಿಸಲಾಗಿದೆ. ಕೃಷ್ಣದಾಸ್ ಬಂಧನ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆಯೂ ದಾಳಿ ನಡೆಸಿರುವುದು ಅತ್ಯಂತ ಕಳವಳಕಾರಿ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಇಸ್ಕಾನ್ ಪ್ರತಿನಿಧಿ ರಾಧಾರಮಣ್ ದಾಸ್ ಅವರು ಚಿನ್ಮಯ್ ಕೃಷ್ಣದಾಸ್ ಬಂಧನದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಚಿನ್ಮಯ್ ಕೃಷ್ಣದಾಸ್ ಬ್ರಹ್ಮಚಾರಿ ಅವರನ್ನು ಬಾಂಗ್ಲಾ ಪೊಲೀಸರು ಬಂಧಿಸಿ, ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬ ಆಘಾತಕಾರಿ ಸುದ್ದಿ ನನಗೆ ತಲುಪಿದೆ. ದಯವಿಟ್ಟು ಗಮನಿಸಿ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಭಾರತೀಯ ಹೈ ಕಮಿಷನ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಚಿನ್ಮಯ್ ಕೃಷ್ಣದಾಸ್ ಬ್ರಹ್ಮಚಾರಿ ಅವರನ್ನು ಈ ವಾರದ ಆರಂಭದಲ್ಲಿ ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಹಿಂದೂಗಳನ್ನು ಗುರಿಯಾಗಿಸಿ ನಡೆಯುತ್ತಿದ್ದ ಹಿಂಸಾಚಾರ ವಿರೋಧಿಸಿ ತಮ್ಮ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾದ ನಂತರ ಈ ಬಂಧನ ನಡೆದಿದೆ.

ಚಿನ್ಮಯ್ ಬಂಧನ ಬಗ್ಗೆ ಬಾಂಗ್ಲಾದೇಶದ ಅಧಿಕಾರಿಗಳು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
.ಬಾಂಗ್ಲಾದಲ್ಲಿ ಹಿಂದೂ ಪುರೋಹಿತ ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ: ವರದಿಗಳು.Bangla Unrest: ಬಾಂಗ್ಲಾದಲ್ಲಿ ಹಿಂದೂ ಕುಟುಂಬದ ಮನೆಗೆ ಬೆಂಕಿ.ಬಾಂಗ್ಲಾದಲ್ಲಿ ಹಿಂದೂ ವಿರೋಧಿ ಮನಸ್ಥಿತಿ ಆತಂಕಕಾರಿ ಬೆಳವಣಿಗೆ: ತಸ್ಲಿಮಾ ನಸ್ರೀನ್.ಬಾಂಗ್ಲಾದಲ್ಲಿ 15 ಹಿಂದೂ ದೇವಾಲಯಗಳ ಧ್ವಂಸ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.