ನವದೆಹಲಿ: ಆಡಳಿತ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಖಾಸಗಿ ಕ್ಷೇತ್ರದ 45 ಪರಿಣತರು ಶೀಘ್ರದಲ್ಲೇ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಹುದ್ದೆಗಳಿಗೆ ಸೇರಲಿದ್ದಾರೆ.

45 ಹುದ್ದೆಗಳಿಗೆ ನೇಮಕಾತಿ ಸಂಬಂಧ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಶನಿವಾರ ಜಾಹೀರಾತು ಪ್ರಕಟಿಸಿದೆ. 10 ಜಂಟಿ ಕಾರ್ಯದರ್ಶಿಗಳು ಮತ್ತು 35 ನಿರ್ದೇಶಕರು/ ಉಪಕಾರ್ಯದರ್ಶಿ ಹುದ್ದೆಗಳನ್ನು ಪರಿಣತರ ಮೂಲಕ ನೇಮಕ ತುಂಬಲಾಗುತ್ತದೆ.

ಸಾಮಾನ್ಯವಾಗಿ ಈ ಹುದ್ದೆಗಳಿಗೆ ಅಖಿಲ ಭಾರತ ಸೇವೆಗಳ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಮತ್ತು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಹಾಗೂ ಮತ್ತು ಇತರ ‘ಎ’ದರ್ಜೆ ಸೇವೆಗಳ ಅಧಿಕಾರಿಗಳು ಇಂತಹ ಪ್ರಮುಖ ಹುದ್ದೆಗಳನ್ನು ನಿಭಾಯಿಸುವರು.

‘ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕ/ ಉಪಕಾರ್ಯದರ್ಶಿ ಮಟ್ಟದ ಅಧಿಕಾರಿಗಳ ಲ್ಯಾಟರಲ್ ಎಂಟ್ರಿ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಕೋರಿಕೆ ಸಲ್ಲಿಸಿದೆ. ಅದರಂತೆ, ರಾಷ್ಟ್ರ ನಿರ್ಮಾಣಕ್ಕಾಗಿ ಕೊಡುಗೆ ನೀಡಲು ಸಿದ್ಧರಿರುವ ಪ್ರತಿಭಾವಂತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ’ ಎಂದು ಜಾಹೀರಾತಿನಲ್ಲಿ ಹೇಳಲಾಗಿದೆ.
.SC, ST, OBC ಸಮುದಾಯವನ್ನು ಮೀಸಲಾತಿಯಿಂದ ದೂರವಿಡಲು ಬಿಜೆಪಿ ಯತ್ನ: ಖರ್ಗೆ ಆರೋಪ.
ಜಂಟಿ ಕಾರ್ಯದರ್ಶಿಗಳ 10 ಹುದ್ದೆಗಳು ಗೃಹ, ಹಣಕಾಸು ಮತ್ತು ಉಕ್ಕು ಒಳಗೊಂಡಂತೆ ಇತರ ಸಚಿವಾಲಯಗಳಿಗೆ ಸಂಬಂಧಿಸಿದ್ದಾಗಿವೆ. ಮೂರು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯಲಿದೆ.

ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು ನೇಮಕ ಮಾಡಿಕೊಳ್ಳುವ ‘ಲ್ಯಾಟರಲ್ ಎಂಟ್ರಿ’ ನೇಮಕಾತಿ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ 2018ರಿಂದಲೂ ನಡೆಸಿಕೊಂಡು ಬರುತ್ತಿದೆ. ಇದುವರೆಗೆ ಈ ರೀತಿ 63 ಮಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಈಚೆಗಿನ ಅಂಕಿ–ಅಂಶ ಪ್ರಕಾರ ಅದರಲ್ಲಿ 57 ಮಂದಿ ಸರ್ಕಾರದ ವಿವಿಧ ಸಚಿವಾಲಯಗಳು/ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.