ಕೋಲ್ಕತ್ತ: ರಾಜ್ಯ ಬಿಜೆಪಿ ನಾಯಕರನ್ನು ಬಂಗಾಳ ವಿರೋಧಿಗಳು ಎಂದು ಕರೆದಿರುವ ತೃಣಮೂಲ ಕಾಂಗ್ರೆಸ್‌ನ ನಾಯಕ ಅಭಿಷೇಕ್ ಬ್ಯಾನರ್ಜಿ, ಮೋದಿಯವರ ಗ್ಯಾರಂಟಿಗೆ ಝೀರೋ ವಾರಂಟಿ ಎಂದು ಲೇವಡಿ ಮಾಡಿದ್ದಾರೆ.

ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ 'ಜನ ಘರ್ಜನ್ ಸಭಾ' ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯದ ಹಣವನ್ನು ತಡೆಹಿಡಿದಿರುವ ಕೇಸರಿ ಪಾಳಯಕ್ಕೆ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ‘ ಎಂದು ಗುಡುಗಿದರು.

‘ಬಿಜೆಪಿ ಮತ್ತು ಅದರ ನಾಯಕರು ಹೊರಗಿನವರಾಗಿದ್ದು, ಬಂಗಾಳ ವಿರೋಧಿಗಳಾಗಿದ್ದಾರೆ. ಅದಕ್ಕಾಗಿಯೇ ಅವರು ರಾಜ್ಯಕ್ಕೆ ನೀಡಬೇಕಾದ ಹಣವನ್ನು ತಡೆಹಿಡಿದಿದ್ದಾರೆ. ಇಷ್ಟಾದರೂ ತೃಣಮೂಲ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತಿದೆ’ ಎಂದು ಹೇಳಿದರು.

ಲೋಕಸಭಾ ಚುನಾವಣಾ ಪ್ರಚಾರಕ್ಕೆ ಇಂದು ಚಾಲನೆ ನೀಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲ್ಲ ಕ್ಷೇತ್ರಗಳಲ್ಲಿಯೂ ಗೆಲ್ಲುವ ಭರವಸೆ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.