ನವದೆಹಲಿ: ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಮುನ್ನ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾದರು.

ಬಿಜೆಪಿ ಸಂಸದೀಯ ಪಕ್ಷದ ನಾಯಕ ಮತ್ತು ಲೋಕಸಭೆಯಲ್ಲಿ ಬಿಜೆಪಿ ನಾಯಕರಾಗಿ ಆಯ್ಕೆಯಾದ ಬಳಿಕ ಶುಕ್ರವಾರ ಅಡ್ವಾಣಿ ಮತ್ತು ಜೋಶಿ ಅವರ ನಿವಾಸಕ್ಕೆ ತೆರಳಿ ಹೂಗುಚ್ಚ ನೀಡಿ ಮಾತುಕತೆ ನಡೆಸಿದರು.

ಮೋದಿಯವರು ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಪಡೆದಿದ್ದರೆ, ಎನ್ಡಿಎ 293 ಸ್ಥಾನಗಳನ್ನು ಪಡೆದು 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತ ಪಡೆದಿದೆ.
.ವಿವೇಕಾನಂದ ರಾಕ್: ಗಮನ ಸೆಳೆದ ಮುರಳಿ ಮನೋಹರ ಜೋಶಿ ಜೊತೆಗಿನ ಮೋದಿ ಫೋಟೊ.ಸರ್ಕಾರದ ಎಲ್ಲಾ ನಿರ್ಧಾರಗಳಲ್ಲೂ ಸರ್ವಾನುಮತ ನಮ್ಮ ಗುರಿ: ಎನ್ಡಿಎ ಸಭೆಯಲ್ಲಿ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.