ನಾನೂರ್ (ಪಶ್ಚಿಮ ಬಂಗಾಳ): ಕಳೆದ ಮೂರ್ನಾಲ್ಕು ವರ್ಷಗಳಿಂದ ‘ಪ್ರಧಾನ ಮಂತ್ರಿ ಆವಾಸ್ ಯೋಜನೆ’ಯಡಿ ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಅನುದಾನದ ವಿವರ ಕುರಿತು ‘ಶ್ವೇತ ಪತ್ರ’ ಬಿಡುಗಡೆಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಟಿಎಂಸಿ ಅಭ್ಯರ್ಥಿ ಅಸಿತ್ ಪಾಲ್ ಪರ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯದ ಜನರಿಗೆ ಆವಾಸ್ ಯೋಜನೆಯಡಿ ಹಣ ಬಿಡುಗಡೆ ಮಾಡದಿರಲು ಕೇಂದ್ರ ಸರ್ಕಾರ ಪಿತೂರಿ ನಡೆಸಿದೆ. ಪ್ರಧಾನಿ ಮೋದಿ ಅವರು ಉಪನ್ಯಾಸಗಳನ್ನು ನೀಡುವ ಬದಲು, ಯೋಜನೆಗಾಗಿ ಮಂಜೂರು ಮಾಡಿರುವ ಅನುದಾನದ ವಿವರ ಕುರಿತು ‘ಶ್ವೇತ ಪತ್ರ’ ಬಿಡುಗಡೆ ಮಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಆವಾಸ್ ಯೋಜನೆಗಾಗಿ ಬಿಜೆಪಿ ಸರ್ಕಾರ ಬಂಗಾಳಕ್ಕೆ ಒಂದೇ ಒಂದು ಪೈಸೆ ನೀಡಿದೆ ಎಂದು ಮೋದಿ ಅವರು ಸಾಬೀತುಪಡಿಸಿದರೆ, ಲೋಕಸಭೆ ಚುನಾವಣೆಗಾಗಿ ಪಕ್ಷದ ಅಭ್ಯರ್ಥಿಗಳು ನಡೆಸುತ್ತಿರುವ ಪ್ರಚಾರವನ್ನು ನಿಲ್ಲಿಸುವುದಾಗಿ ಅಭಿಷೇಕ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.