ನವದೆಹಲಿ: ಮೋದಿ ಉಪನಾಮ ಬಗ್ಗೆ ತಾವು ನೀಡಿದ ಹೇಳಿಕೆಗೆ ಸಂಬಂಧ ಗುಜರಾತ್‌ನ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ರದ್ದು ಮಾಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಶನಿವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ರಾಹುಲ್ ಗಾಂಧಿ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ಪರವಾಗಿ ಎಸ್. ಪ್ರಸನ್ನ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ .

2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ, ‘ಕಳ್ಳರೆಲ್ಲರಿಗೂ ಮೋದಿ ಉಪನಾಮ ಏಕಿರುತ್ತದೆ‘ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರು.

ಈ ಹೇಳಿಕೆಯಿಂದ ಮೋದಿ ಸಮುದಾಯಕ್ಕೆ ಅವಮಾನವಾಗಿದೆ ಎಂದು ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಎಂಬವರು ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ರಾಹುಲ್ ಗಾಂಧಿ ಅವರನ್ನು ತಪ್ಪಿತಸ್ಥ ಎಂದು ಘೋಷಣೆ ಮಾಡಿ 2 ವರ್ಷಗಳ ಸಜೆ ಶಿಕ್ಷೆ ವಿಧಿಸಿತ್ತು.

ಇದರ ಬೆನ್ನಲ್ಲೇ ಅವರ ಲೋಕಸಭಾ ಸದಸ್ಯತ್ವವನ್ನೂ ರದ್ದು ಮಾಡಲಾಗಿತ್ತು.

ಸೂರತ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೆಳ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ತಡೆ ನೀಡಬೇಕು ಎಂದು ಕೋರಿದ್ದರು. ಆದರೆ ಹೈಕೋರ್ಟ್ ಅವರ ಅರ್ಜಿಯನ್ನು ತಳ್ಳಿ ಹಾಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.