ಪುರಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಪುರಿ ಜಗನ್ನಾಥ ಮಂದಿರಕ್ಕೆ ಶುಕ್ರವಾರ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.

ಜಗನ್ನಾಥನ ದರ್ಶನ ಪಡೆದ ಬಳಿಕ ಭಾಗವತ್ ಅವರು ಗೋವರ್ಧನ ಪೀಠಕ್ಕೆ ತೆರಳಿ, ಪೀಠಾಧಿಪತಿ ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಪುರಿಯಲ್ಲಿ ಶನಿವಾರ ಹಾಗೂ ಭಾನುವಾರ ಅಖಿಲ ಭಾರತ ಪ್ರಾಂತ ಸೇವಾ ಪ್ರಮುಖರ ಸಭೆ ನಿಗದಿಯಾಗಿದೆ. ಈ ಸಭೆಗೆ ಹಾಜರಾಗಲೆಂದು ಗುರುವಾರವೇ ಪುರಿಗೆ ಆಗಮಿಸಿರುವ ಭಾಗವತ್ ಅವರು, ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹಾಗೂ ಉಪ ಮುಖ್ಯಮಂತ್ರಿಗಳಾದ ಕೆ.ವಿ.ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಅವರೊಂದಿಗೂ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.