ಮುಂಬೈ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಎರಡು ತಿಂಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಬಾಂಬೆ ಹೈಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎನ್.ಜೆ.ಜಾಮದಾರ್ ಅವರು, ‘ಗೋಯಲ್ ಅವರ ಆರೋಗ್ಯ ದೃಷ್ಟಿಯಿಂದ ಜಾಮೀನು ನೀಡಲಾಗಿದೆ. ಗೋಯಲ್ ಅವರು ₹1 ಲಕ್ಷ ಠೇವಣಿ ಇಡಬೇಕು ಮತ್ತು ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ಮುಂಬೈನಿಂದ ಹೊರಗೆ ಹೋಗಬಾರದು’ ಎಂದು ಹೇಳಿದರು. ಪಾಸ್‌ಪೋರ್ಟ್ ವಶಕ್ಕೆ ಒಪ್ಪಿಸುವಂತೆಯೂ ತಿಳಿಸಿದರು.

ಗೋಯಲ್ ಮತ್ತು ಅವರ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಸೆಪ್ಟೆಂಬರ್ 2023ರಂದು ಗೋಯಲ್ ಅವರನ್ನು ಬಂಧಿಸಿದೆ.
.ಜೆಟ್ ಏರ್‌ವೇಸ್ ಸ್ಥಾಪಕ ನರೇಶ್ ಗೋಯಲ್‌ಗೆ 14 ದಿನ ನ್ಯಾಯಾಂಗ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.