ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಮುಂಬೈನ ವಿಶೇಷ ನ್ಯಾಯಾಲಯವು 14 ದಿನಗಳವರೆಗೆ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ಅನಾರೋಗ್ಯದಿಂದ ಬಳಲುತ್ತಿರುವ ಮಲಿಕ್ ಅವರನ್ನು ಕುರ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಎನ್‌ಸಿಪಿ ಹಿರಿಯ ನಾಯಕರೂ ಆಗಿರುವ ಮಲಿಕ್ (62) ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ವರ್ಷ ಫೆಬ್ರುವರಿ 23ರಂದು ಇ.ಡಿ ಬಂಧಿಸಿತ್ತು. ಅವರು ಪ್ರಸ್ತುತ ಜೈಲಿನಲ್ಲಿದ್ದಾರೆ.

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಭಯೋತ್ಪಾದಕ ದಾವೂದ್ ಇಬ್ರಾಹಿಂ ಮತ್ತು ಅವರ ಸಹಚರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚೆಗೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದೆ. ಅದನ್ನು ಆಧರಿಸಿ ಇ.ಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.

ಹಣ ಅಕ್ರಮ ವರ್ಗಾವಣೆಯಲ್ಲಿ ದಾವೂದ್ ಇಬ್ರಾಹಿಂ ಸಂಬಂಧಿಕರು ಶಾಮೀಲಾಗಿದ್ದಾರೆ ಎಂಬ ಆರೋಪಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.