ಪಟ್ನಾ: ಬಿಹಾರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ 69 ಲಕ್ಷಕ್ಕೂ ಹೆಚ್ಚು ಜನ ತೊಂದರೆಗೆ ಸಿಲುಕಿದ್ದು, ಮೃತರ ಸಂಖ್ಯೆ21ಕ್ಕೆ ಏರಿಕೆಯಾಗಿದೆ.

ರಕ್ಷಣಾ ಕಾರ್ಯಾಚರಣೆಗಾಗಿ ವಿವಿಧ ಜಿಲ್ಲೆಗಳಲ್ಲಿ ಈವರೆಗೆ ಎನ್ಡಿಆರ್ಎಫ್ನ 33 ತಂಡಗಳನ್ನು ನಿಯೋಜಿಸಲಾಗಿದೆ. 8 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಸಂತ್ರಸ್ತರಿಗಾಗಿ 1,402 ಸಮುದಾಯ ಅಡುಗೆ ಕೇಂದ್ರಗಳನ್ನು ಆರಂಭಿಸಲಾಗಿದೆ. 12,239 ಜನರಿಗೆ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇದನ್ನೂ ಓದಿ:ಕೊಡಗು | ಕುಶಾಲನಗರದಲ್ಲಿ ಪ್ರವಾಹ, ಭಗಂಡೇಶ್ವರನಿಗೆ ಜಲದಿಗ್ಬಂಧನ

ಪ್ರವಾಹದಿಂದಾಗಿ ಸಾವು ಸಂಭವಿಸಿರುವುದಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬದವರಿಗೆ ಪರಿಹಾರ ಒದಗಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿರುವ ನಿತೀಶ್ ಕುಮಾರ್, ದರ್ಭಾಂಗದಲ್ಲಿರುವ ಪರಿಹಾರ ಕೇಂದ್ರ ಮತ್ತು ಸಮುದಾಯ ಅಡುಗೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬಿಹಾರ, ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ: ಎನ್ಡಿಆರ್ಎಫ್ ತಂಡಗಳ ನಿಯೋಜನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.