ಥಾಣೆ: ದೇಶದ 78ನೇ ಸ್ವಾತಂತ್ರ್ಯ ದಿನದಂದು ಅನುಮತಿ ಪಡೆಯದೆ ಬೈಕ್ ರ‍್ಯಾಲಿ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) 50ಕ್ಕೂ ಹೆಚ್ಚು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಎಸ್‌ಡಿಪಿಐ ಸದಸ್ಯರು ಥಾಣೆಯ ಮುಂಬ್ರಾದಲ್ಲಿ ಬೈಕ್ ರ‍್ಯಾಲಿ ನಡೆಸಿದ್ದರು. ಇವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223 (ಸಾರ್ವಜನಿಕ ಆದೇಶ ಪಾಲನೆ) ಹಾಗೂ ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

'ಈವರೆಗೆ ಯಾರನ್ನೂ ಬಂಧಿಸಿಲ್ಲ. ಮುಂಬ್ರಾದಿಂದ ತಲೌಪಲಿವರೆಗೆ ಬೈಕ್ ರ‍್ಯಾಲಿ ನಡೆಸಲಾಗಿತ್ತು. ರ‍್ಯಾಲಿಯಲ್ಲಿ ಪಾಲ್ಗೊಂಡ ಯಾರೊಬ್ಬರೂ ಪೊಲೀಸರ ಅನುಮತಿ ಪಡೆದಿರಲಿಲ್ಲ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.