ಗುರುಗ್ರಾಮ: ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಹನ್ನೆರಡು ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿರುವ ಘಟನೆ ದೆಹಲಿ–ಗುರುಗ್ರಾಮ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದೆ.

ಬೆಂಕಿಯಿಂದ ಬಸ್ ಸುಟ್ಟು ಕರಕಲಾಗಿದ್ದು, ಬೆಂಕಿ ಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಗಾಯಗೊಂಡವರಲ್ಲಿ ಐದು ಮಂದಿಯನ್ನು ಮೇದಾಂತ ಆಸ್ಪತ್ರೆಗೆ ಮತ್ತು ಏಳು ಮಂದಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಸ್, ದೆಹಲಿಯಿಂದ ಜೈಪುರಕ್ಕೆ ಸಂಚಾರಿಸುತ್ತಿದ್ದಾಗ ಝಾರ್ಸಾ ಮೇಲ್ಸೇತುವೆ ಬಳಿ ರಾತ್ರಿ ಸುಮಾರು 8.30ಕ್ಕೆ ಈ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ಇಲಾಖೆ ಉಪನಿರ್ದೇಶಕ ಗುಲ್ಶನ್ ಹೇಳಿದ್ದಾರೆ.

ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತರುವಷ್ಟರಲ್ಲಿ ಇಬ್ಬರು ಪ್ರಯಾಣಿಕರು ಸುಟ್ಟು ಕರಕಲಾಗಿದ್ದರು. ಇತರ ಕೆಲವು ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ನಿಶಾಂತ್ ಕುಮಾರ್ ಯಾದವ್ ಮತ್ತು ಗುರುಗ್ರಾಮ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ಅರೋರಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ನಿಶಾಂತ್ ಕುಮಾರ್ ಯಾದವ್ ಮತ್ತು ಗುರುಗ್ರಾಮ್ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅರೋರಾ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.