ಭೋಪಾಲ್: ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರಿಗೆ ಇಲ್ಲಿನ ವಿಶೇಷ ನ್ಯಾಯಾಲಯವು ಶನಿವಾರ ಜಾಮೀನು ಮಂಜೂರು ಮಾಡಿದೆ.

ವೃತ್ತಿಪರ ಶಿಕ್ಷಣ ಕೋರ್ಸ್ಗಳಿಗೆ ಪ್ರವೇಶ ಹಾಗೂ ಸರ್ಕಾರಿ ಸೇವೆಗಳಿಗೆ ನೇಮಕಾತಿ ಸಂಬಂಧ ಮಧ್ಯಪ್ರದೇಶ ವ್ಯವಸಾಯಿಕ್ ಮಂಡಳಿ (ವ್ಯಾಪಂ) ನಡೆಸಿದ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಲ್ಲಿ ಬಿಜೆಪಿ ಮುಖಂಡ ವಿ.ಡಿ. ಶರ್ಮಾ ಅವರು ಭಾಗಿಯಾಗಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಅವರು ಆರೋಪಿಸಿದ್ದರು. 2014ರಲ್ಲಿ ಶರ್ಮಾ ಅವರು ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಶರ್ಮಾ ಅವರು ಸದ್ಯ ಮಧ್ಯಪ್ರದೇಶದ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷರಾಗಿದ್ದಾರೆ.

‘ನ್ಯಾಯಾಲಯವು ನನಗೆ ಜಾಮೀನು ನೀಡಿದೆ. ವ್ಯಾಪಂ ಹಗರಣದ ಆರೋಪಿ ವಿರುದ್ಧ ಮಧ್ಯಪ್ರದೇಶ ಸರ್ಕಾರ ಯಾವುದೇ ಕ್ರಮ ಜರುಗಿಸಿಲ್ಲ’ ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.