ಭೋಪಾಲ್: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂದು ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಆಗ್ರಹಿಸಿದ್ದಾರೆ.

'ತೀಸ್ತಾ ಜಾವೇದ್ ಸೆಟಲ್ವಾಡ್ ಅವರು ಅವಾರ್ಡ್ ವಾಪ್ಸಿ ಗುಂಪಿನ ಸದಸ್ಯೆಯಾಗಿದ್ದಾರೆ. ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು' ಎಂದು ರಾಜ್ಯ ಸರ್ಕಾರದ ವಕ್ತಾರರೂ ಆಗಿರುವ ನರೋತ್ತಮ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ವಂಚನೆ, ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಬಂಧನ: ಅಧಿಕಾರಿಗಳು

2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಅವರನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮುಂಬೈನಲ್ಲಿ ಬಂಧಿಸಿತ್ತು. ಬಳಿಕ ನಕಲಿ ಸಹಿ, ಕ್ರಿಮಿನಲ್ ಪಿತೂರಿ ಮತ್ತಿತರ ಪ್ರಕರಣದಲ್ಲಿ ಭಾನುವಾರ ಅಹಮದಾಬಾದ್ ಕ್ರೈಂ ಬ್ರಾಂಚ್ಗೆ ಅವರನ್ನು ಹಸ್ತಾಂತರಿಸಿದೆ.

ತೀಸ್ತಾ ಅವರಿಗೆ 2007ರಲ್ಲಿ ಪ್ರತಿಷ್ಠಿತ ನಾಗರಿಕ ಪ್ರಶಸ್ತಿ ಪದ್ಮಶ್ರೀಯನ್ನು ಪುರಸ್ಕರಿಸಲಾಗಿದೆ.

ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳವು (ಎಟಿಎಸ್) ವಶಕ್ಕೆ ಪಡೆದುಕೊಂಡಿರುವುದನ್ನು ಖಂಡಿಸಿ, ರಾಜ್ಯ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿವೆ.

ಇದನ್ನೂ ಓದಿ:ತೀಸ್ತಾ ಬಂಧನ ಪ್ರಜಾಸತ್ತಾತ್ಮಕತೆ ಬಯಸುವವರಿಗೆ ಒಡ್ಡಿದ ಬೆದರಿಕೆ: ಎಡ ಪಕ್ಷಗಳು

ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರುಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ವಶದಲ್ಲಿ ಇದ್ದಾರೆ.

2002ರ ಗೋಧ್ರಾ ನಂತರದ ದಂಗೆ ಪ್ರಕರಣಗಳಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ಎಸ್ಐಟಿ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಕೋಮುಗಲಭೆಗಳ ಬಗ್ಗೆ ಗುಜರಾತ್ ಸರ್ಕಾರದ ವೈಫಲ್ಯವನ್ನು ಪ್ರಶ್ನಿಸಿ ಆಧಾರರಹಿತ ತಪ್ಪು ಆರೋಪಗಳನ್ನು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದೂ ಸುಪ್ರೀಂ ಕೋರ್ಟ್ ಹೇಳಿತ್ತು. ಇದಾದ ಬಳಿಕ ಸೆಟಲ್ವಾಡ್, ಶ್ರೀಕುಮಾರ್ ಮತ್ತು ಭಟ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ:ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಯೆಚೂರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.