ನವದೆಹಲಿ: ‘ಕ್ರಿಮಿನಲ್ಪ್ರಕರಣಗಳಲ್ಲಿ ಸಂಸದರಿಗೆ ಬಂಧನದಿಂದ ರಕ್ಷಣೆ ಇಲ್ಲ’ ಎಂದು ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ರಾಜ್ಯಸಭೆಯಲ್ಲಿ ಶುಕ್ರವಾರ ಹೇಳಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ,ಸಂಸತ್ ಅಧಿವೇಶನದ ಮಧ್ಯೆಯೇ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ನೀಡಿದ್ದನ್ನು ಖಂಡಿಸಿ ವಿರೋಧ ಪಕ್ಷಗಳ ಸದಸ್ಯರು
ಶುಕ್ರವಾರ ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ವೆಂಕಯ್ಯ ನಾಯ್ಡು ಅವರು ಹೀಗೆ ಹೇಳಿದ್ದಾರೆ.

‘ಸಂಸದರಿಗೆ ಬಂಧನದಿಂದ ರಕ್ಷಣೆ ಇದೆ ಎಂಬ ಸಾಮಾನ್ಯ ನಂಬಿಕೆ ಇದೆ. ಆದರೆ, ನಿಜಕ್ಕೂ ಹಾಗಿಲ್ಲ. ಸಿವಿಲ್
ಪ್ರಕರಣಗಳಲ್ಲಾದರೆ, ಅಧಿವೇಶನದ ಅವಧಿ ಮತ್ತು ಆನಂತರದ 40 ದಿನದ ಒಳಗೆ ಸಂಸದರನ್ನು ಬಂಧಿಸುವಂತಿಲ್ಲ. ಆದರೆ ಕ್ರಿಮಿನಲ್ ಪ್ರಕರಣಗಳಲ್ಲಿ ಅಂತಹ ರಕ್ಷಣೆ ಇಲ್ಲ’ ಎಂದು ಅವರು ಹೇಳಿದ್ದಾರೆ.

ಯಾವ ಸದಸ್ಯರೂ ಸದನದಲ್ಲಿ ಕಲಾಪ ನಡೆಯುತ್ತಿದೆ ಎಂಬ ನೆಪ ಒಡ್ಡಿ, ತನಿಖಾ ಸಂಸ್ಥೆಗಳ ಎದುರು ವಿಚಾರಣೆಗೆ ಹಾಜರಾಗುವುದನ್ನು ತಪ್ಪಿಸಬಾರದು ಎಂದು ಅವರು ಹೇಳಿದ್ದಾರೆ.

ಕಲಾಪ ಮುಂದೂಡಿಕೆ:ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ವಿರೋಧಪಕ್ಷಗಳ ಸಂಸದರು ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಹೀಗಾಗಿ ಕಲಾಪವನ್ನು ಕೆಲಕಾಲ ಮುಂದೂಡಲಾಗಿತ್ತು.

ಬೆಲೆ ಏರಿಕೆ ಕುರಿತು ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಆರೋಪಿಸಿ ಲೋಕಸಭೆಯಲ್ಲಿ ಡಿಎಂಕೆ ಸದಸ್ಯರು ಸದನದಿಂದ ಹೊರ ನಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.