ನವದೆಹಲಿ: 12 ರಾಜ್ಯಸಭಾ ಸದಸ್ಯರ ಅಮಾನತು ಖಂಡಿಸಿ ಸಂಸತ್ತಿನ ಒಳಗೂ, ಹೊರಗೂ ಬುಧವಾರ ಪ್ರತಿಭಟನೆ ನಡೆಯಿತು. 12 ಸಂಸದರು ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು. ತಮ್ಮ ಮೇಲಿನ ಅಮಾನತು ಆದೇಶವನ್ನು ವಾಪಸ್ ಪಡೆಯುವವರೆಗೂ ಪ್ರತಿಭಟನೆ ಮುಂದುರಿಸುವುದಾಗಿ ಅವರು ತಿಳಿಸಿದರು.

‘ವಿರೋಧ ಪಕ್ಷಗಳ ಸಂಸದರು ಉಭಯ ಸದನಗಳಲ್ಲಿ ಪ್ರತಿದಿನ ಬೆಳಿಗ್ಗೆ 10ರಿಂದ 11 ಗಂಟೆವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆ. ಅಮಾನತು ಗೊಂಡ ಸಂಸದರು ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ಗಾಂಧಿ ಪ್ರತಿಮೆ ಎದುರು ಧರಣಿ ಕೂರಲಿದ್ದಾರೆ’ ಎಂದು ಅಮಾನತುಗೊಂಡಿರುವ ಸಂಸದ ರಿಪುನ್ ಬೋರಾ ತಿಳಿಸಿದ್ದಾರೆ.

ರೈತರ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ್ದಕ್ಕೆ ತಮಗೆ ಅಮಾನತು ಶಿಕ್ಷೆ ನೀಡಿದ್ದು ಏಕೆ ಎಂದು ಸಭಾಪತಿ ವೆಂಕಯ್ಯ ನಾಯ್ಡು ಅವರು ವಿವರಣೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಡೆ ಬದಲಿಸಿದ ಟಿಎಂಸಿ:ತೃಣಮೂಲ ಕಾಂಗ್ರೆಸ್ ಬುಧವಾರ ತನ್ನ ಕಾರ್ಯತಂತ್ರವನ್ನು ಸ್ವಲ್ಪ ಬದಲಾಯಿಸಿತು. ಸದಸ್ಯರ ಅಮಾನತು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಇತರ ಪಕ್ಷಗಳೊಂದಿಗೆ ಕೈಜೋಡಿಸಿತು.

ರಾಜ್ಯಸಭೆಯಲ್ಲಿ ಗದ್ದಲ: ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳು ಭಾರಿ ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ಹಲವು ಬಾರಿ ಮುಂದೂಡಲಾಯಿತು. ಸಭಾಧ್ಯಕ್ಷರ ಪೀಠದ ಎದುರು ಜಮಾಯಿಸಿದ ಸದಸ್ಯರು, ಮಸೂದೆ ಮಂಡಿಸಲು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಅವಕಾಶ ನೀಡಲಿಲ್ಲ.ಟಿಆರ್‌ಎಸ್ ಸದಸ್ಯರುರೈತರ ವಿಷಯ ಮುಂದಿಟ್ಟುಕೊಂಡು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.