ತಿರುವನಂತಪುರಂ: ಭಾರತದ ‘ಹಸಿರು ಕ್ರಾಂತಿಯ ಪಿತಾಮಹ‘, ಖ್ಯಾತ ವಿಜ್ಞಾನಿ ಡಾ.ಎಂ.ಎಸ್. ಸ್ವಾಮಿನಾಥನ್ ಮತ್ತು ಖ್ಯಾತ ಭೌತಶಾಸ್ತ್ರಜ್ಞ ತನು ಪದ್ಮನಾಭನ್ ಅವರನ್ನು 2021ನೇ ಸಾಲಿನ ಕೇರಳದ ವಿಜ್ಞಾನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹2 ಲಕ್ಷ ನಗದು, ಪ್ರಶಸ್ತಿ ಫಲಕ ಮತ್ತು ಅಭಿನಂದನಾ ಪತ್ರವನ್ನು ಒಳಗೊಂಡಿದೆ ಎಂದು ಮಂಗಳವಾರ ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಂ.ಎಸ್.ಸ್ವಾಮಿನಾಥನ್ ಅವರು ಕೃಷಿ ಸಂಶೋಧನಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ತನು ಪದ್ಮನಾಭನ್ ಅವರು ಭೌತಶಾಸ್ತ್ರ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.

ವಿಜ್ಞಾನ ಕ್ಷೇತ್ರದ ಈ ಅತ್ಯುನ್ನತ ಪ್ರಶಸ್ತಿಯನ್ನು, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಮತ್ತು ಕೇರಳ ರಾಜ್ಯ ವಿಜ್ಞಾನ, ತಂತ್ರಜ್ಞಾನ ಮತ್ತು ಪರಿಸರ ಮಂಡಳಿ ಜಂಟಿಯಾಗಿ ಸ್ಥಾಪಿಸಿವೆ. ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ ವಿಜ್ಞಾನಿಗಳಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.