ಬಾಂಡಾ: ಉತ್ತರಪ್ರದೇಶದ ಬಾಂಡಾ ವೈದ್ಯಕೀಯ ಕಾಲೇಜಿನಲ್ಲಿ ಮೃತಪಟ್ಟ ಶಾಸಕ, ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಯ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಬಿಗಿ ಭದ್ರತೆಯಲ್ಲಿ ಗಾಜಿಪುರದಲ್ಲಿರುವ ಹುಟ್ಟೂರಿಗೆ ಕರೆತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹ ಹೊತ್ತೊಯ್ಯುತ್ತಿದ್ದ ಆಂಬುಲೆನ್ಸ್ಗೆ ಬಿಗಿ ಭದ್ರತೆ ಒದಗಿಸಲಾಗಿದ್ದು, 26 ಬೆಂಗಾವಲು ವಾಹನ ಮತ್ತು 24 ಪೊಲೀಸ್ ವಾಹನಗಳೊಂದಿಗೆ ಮುಖ್ತಾರ್ ಮೃತದೇಹವನ್ನು ತರಲಾಗುತ್ತಿದೆ.

ಗಾಜಿಪುರ ಮತ್ತು ಮೌಊ ಪ್ರದೇಶದ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಮನೆಯ ಸುತ್ತಮುತ್ತ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯ ಹೊತ್ತಿಗೆ ಆಂಬುಲೆನ್ಸ್ ಗಾಜಿಪುರ ತಲುಪಲಿದ್ದು ರಾತ್ರಿ ಅಥವಾ ಶನಿವಾರ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮುಖ್ತಾರ್ ಕುಟುಂಬ ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
.ಗ್ಯಾಂಗ್ಸ್ಟರ್–ರಾಜಕಾರಣಿ ಅನ್ಸಾರಿ: 63 ಪ್ರಕರಣ: 19 ವರ್ಷ ಜೈಲು; 5 ಬಾರಿ ಶಾಸಕ.ಮುಖ್ತಾರ್ ಅನ್ಸಾರಿ ಸಾವು:ನ್ಯಾಯಾಂಗ ತನಿಖೆಗೆ ಆದೇಶಿಸಿದ ಬಾಂಡಾ ಜಿಲ್ಲಾ ನ್ಯಾಯಾಲಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.