ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇವರೊಂದಿಗೆ ಉಕ್ಕು ಖಾತೆ ಸಚಿವ ಆರ್ಸಿಪಿ ಸಿಂಗ್ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಇಬ್ಬರ ಸಚಿವರ ರಾಜ್ಯಸಭಾ ಸದಸ್ಯ ಸ್ಥಾನದ ಅವಧಿ ಇಂದಿಗೆ ಅಂತ್ಯಗೊಂಡಿದ್ದರಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ನಖ್ವಿ ಅವರನ್ನು ಮತ್ತೊಂದು ಅವಧಿಗೆ ರಾಜ್ಯಸಭೆಗೆ ಕಳಿಸದಿರಲು ಬಿಜೆಪಿ ನಿರ್ಧರಿಸಿದೆ. ಹಾಗೆಯೇ ಆರ್ಸಿಪಿ ಸಿಂಗ್ ಅವರನ್ನು ಕೂಡ ಜೆಡಿ (ಯು) ಪಕ್ಷ ರಾಜ್ಯಸಭೆಗೆ ಕಳಿಸದಿರಲು ನಿರ್ಧರಿಸಿದೆ. ಬಿಹಾರದಲ್ಲಿ ಆರ್ಸಿಪಿ ಸಿಂಗ್ ಜೆಡಿಯು ನಾಯಕರಾಗಿದ್ದಾರೆ.

ಈ ಕುರಿತು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಬಿಜೆಪಿ ನಾಯಕರಾಗಿರುವ ನಖ್ವಿ ಅವರು ಮೋದಿ ಸಂಪುಟ 2.0 ದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿದ್ದರು.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.